ಬೆಂಗಳೂರು : ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕಿಂತ ದೇಶ ದೊಡ್ಡದು. ಪಕ್ಷಕ್ಕಿಂತ ಯಾರು ಮುಖ್ಯರಲ್ಲ ಮುಂದಿನ 20 ವರ್ಷಗಳ ನಾಯಕತ್ವಕ್ಕಾಗಿ ಬಿ ವೈ ವಿಜಯೇಂದ್ರ ಅಧ್ಯಕ್ಷ ಮಾಡಿದ್ದು ಯಡಿಯೂರಪ್ಪ ವಿಜಯೇಂದ್ರರನ್ನು ಟೀಕಿಸಿದಂತೆ ಪಕ್ಷ ಟೀಕಿಸಿದಂತೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಪರೋಕ್ಷವಾಗಿ ಶಾಸಕ ಯತ್ನಾಳ್ ವಿರುದ್ಧ ಕಿಡಿ ಕಾರಿದರು.
ಶಾಸಕ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್ ನೀಡಿರುವ ವಿಚಾರವಾಗಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಹೈಕಮಾಂಡ್ ನೋಟಿಸ್ ಏನು ಅಲ್ಲವೆಂದು ಕೆಲವರು ಮಾತನಾಡಿದ್ದಾರೆ. ರಾಜ್ಯದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲರ ಹೇಳಿಕೆಯನ್ನು ಗಮನಿಸುತ್ತಾರೆ. ಯಾವ ಸಂದರ್ಭದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ನೋಡುತ್ತಾರೆ ಎಂದರು.ನಾಳೆ ನಾವು ಸಭೆ ನಡೆಸಬೇಕು ಎಂದಿದ್ದೆವು. ಯಡಿಯೂರಪ್ಪ ರಾಜ್ಯ ಬಿಜೆಪಿ ಅಧ್ಯಕ್ಷರು ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ನಾಳಿನ ಸಭೆಯನ್ನು ರದ್ದು ಮಾಡಿದ್ದೇವೆ.
ನಮ್ಮ ಉದ್ದೇಶ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಒಂದಾಗಬೇಕು ಎಂಬುದಾಗಿದೆ. ರಾಜ್ಯಾಧ್ಯಕ್ಷರ ಹೆಗಲಿಗೆ ಹೆಗಲು ಕೊಟ್ಟು ಸಂಘಟನೆಗೆ ಕೈಜೋಡಿಸಬೇಕು ರಾಷ್ಟ್ರೀಯ ನಾಯಕರ ತೀರ್ಮಾನ ಪ್ರಶ್ನೆ ಮಾಡುವ ಹಕ್ಕು ನಮಗೆ ಇಲ್ಲ. ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರು ಆಯ್ಕೆಗೆ ತಡೆ ಬಗ್ಗೆ ಗೊತ್ತಿಲ್ಲ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರ ಆಯ್ಕೆಯಲ್ಲಿ ಬಿ ಇ ವಿಜಯೇಂದ್ರ ಯಾವುದೇ ಪಾತ್ರವಿಲ್ಲ ಎಂದು ಎಂಪಿ ರೇಣುಕಾಚಾರ್ಯ ತಿಳಿಸಿದರು.