ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಬೆನ್ನಲ್ಲೇ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿಗೆ ಹೆಚ್ಚಿನ ಭದ್ರತೆ ನೀಡಲು ಪೊಲೀಸರು ಮುಂದಾಗಿದ್ದಾರೆ.
ನಿನ್ನೆ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ ಬಳಿಕ ಎಚ್ಚೇತ್ತಿರುವ ಪೊಲೀಸ್ ಇದೀಗ ಬಿಜೆಪಿ ಎಂಎಲ್ ಸಿ. ಸಿ.ಟಿ. ರವಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಸಿ.ಟಿ.ರವಿ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.