ತುಮಕೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದ್ದು ಅಲ್ಲದೆ ಇದೇ ಸಂದರ್ಭದಲ್ಲಿ 13 ಸಚಿವರು ಕೂಡ ಪದಗ್ರಹಣ ಮಾಡಿದರು. ಇದೀಗ ಜೂನ್ 23 ಅಥವಾ 25 ರಂದು ಸಂಪುಟ ವಿಸ್ತರಣೆ ಆಗುವ ವಿಶ್ವಾಸ ಇದೆ ಎಂದು ಶಾಸಕ ಟಿಬಿ ಜಯಚಂದ್ರ ತಿಳಿಸಿದರು.
ತುಮಕೂರಿನಲ್ಲಿ ಮಾತನಾಡಿದ ಅವರು ದೆಹಲಿ ವಿಶೇಷ ಪ್ರತಿನಿಧಿಯಾಗಿ ಅನೇಕ ಸಭೆಗಳನ್ನು ನಾನು ಮಾಡಿದ್ದೇನೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಎಲ್ಲೋ ಒಂದು ಕಡೆ ಸಚಿವ ಸ್ಥಾನ ಸಿಗುತ್ತೆ ಎಂಬ ವಿಶ್ವಾಸವಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ನಾನು ಸಹ ಮನವಿ ಮಾಡಿದ್ದೇನೆ. ರಾಜಕೀಯದಲ್ಲಿ ಯಾರೂ ಗ್ರೀನ್ ಸಿಗ್ನಲ್ ಮತ್ತು ಪಾಸಿಟಿವ್ ಕೊಡಲ್ಲ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ರಾಜ್ಯ ಜಿಲ್ಲೆ ಮತ್ತು ಕ್ಷೆತ್ರಕ್ಕೆ ಯಾವ ರೀತಿ ಕೆಲಸ ಮಾಡಬೇಕು ಎಂಬ ಅರಿವು ಇದೆ ಎಂದು ತುಮಕೂರಿನಲ್ಲಿ ಕಾಂಗ್ರೆಸ್ ಶಾಸಕ ಟಿ ಬಿ ಜಯಚಂದ್ರ ಹೇಳಿಕೆ ನೀಡಿದರು.








