ಬೆಂಗಳೂರು : ನಕಲಿ ದಾಖಲೆ ಸೃಷ್ಟಿಸಿ ವಂಚಿಸಿದ ಆಸ್ತಿ ನೋಂದಣಿ ರದ್ದುಪಡಿಸಲು ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ನ ರಾಮೋಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರ ಹೆಸ ರಿನಲ್ಲಿ ಆಸ್ತಿ ನೋಂದಣಿ ಮಾಡಿ ವಂಚಿಸಿರುವುದು ಸಾಬೀತಾದಲ್ಲಿ ಅಂತಹ ನೋಂದಣಿ ರದ್ದುಪಡಿಸುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಕರಡು ನಿಯಮವನ್ನು ಈ ತಿಂಗಳಲ್ಲಿ ಪ್ರಕಟಿಸಲಾಗುವುದು ತಿಳಿಸಿದರು.
ನಕಲಿ ದಾಖಲೆ, ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡಿಕೊಂಡ ಮೇಲೆ ವಂಚನೆಗೆ ಒಳಗಾದವರು ಕೋರ್ಟ್ಗೆ ಹೋಗಬೇಕಾಗುತ್ತದೆ. ಕೋರ್ಟ್ಗೆ ಹೋದರೆ ಪ್ರಕರಣ ಇತ್ಯರ್ಥವಾಗಲು ವರ್ಷಗಟ್ಟಲೆ ಬೇಕಾಗುತ್ತದೆ, ಹೀಗಾಗಿ ಇಂತಹ ವಂಚನೆ ಗಳ ಪ್ರಕರಣಗಳು ಸಾಬೀತಾದಲ್ಲಿ ಅಂತಹ ನೋಂದಣಿ ರದ್ದು ಮಾಡುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಲು ಉದ್ದೇಶಿಸಲಾಗಿದೆ ಎಂದರು.