ಬೆಂಗಳೂರು : ಪಾನಿಪುರಿಯ ಹಲವು ಮಾದರಿಗಳು ಆಹಾರ ಸುರಕ್ಷತೆಯ ಪರೀಕ್ಷೆಯಲ್ಲಿ ವಿಫಲವಾಗಿದ್ದು, ಇವುಗಳಲ್ಲಿ ಕ್ಯಾನ್ಸರ್‌ ಕಾರ ಅಂಶಗಳಿರುವುದು ದೃಢವಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.

ಕಾಟನ್ ಕ್ಯಾಂಡಿ, ಗೋಬಿ ಹಾಗು ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ಬಳಕೆಯನ್ನು ನಿಷೇಧಿಸಿರುವಂತೆಯೇ ರಾಜ್ಯದಲ್ಲಿ ಮಾರಾಟವಾಗುತ್ತಿರುವ ಪಾನಿಪೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಪಾನಿಪುರಿಯ ಹಲವು ಮಾದರಿಗಳೂ ಸಹ ಆಹಾರ ಸುರಕ್ಷತೆಯ ಪರೀಕ್ಷೆಯಲ್ಲಿ ವಿಫಲವಾಗಿದ್ದು ಇವುಗಳಲ್ಲಿ ಕಾನ್ಸರ್ ಕಾರಕ ಅಂಶಗಳಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಹೆಚ್ಚಿನ ವಿಶ್ಲೇಷಣೆ ನಡೆಸಲಾಗುತ್ತಿದ್ದು ಪರೀಕ್ಷಾ ವರದಿ ಬಂದ ಬಳಿಕ ಆರೋಗ್ಯ ಇಲಾಖೆಯು ಸೂಕ್ತ ಕ್ರಮ ಕೈಗೊಳ್ಳಲಿದೆ. ಇದೇ ಸಮಯದಲ್ಲಿ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಮತ್ತು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವ ಆಹಾರ ಪದಾರ್ಥಗಳ ಸೇವನೆಯಿಂದ ದೂರವಿರಬೇಕು. ಸ್ವಚ್ಛತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಮಹತ್ವ ಕೊಡಬೇಕು ಎಂದು ಸೂಚನೆ ನೀಡಿದ್ದಾರೆ.

Share.
Exit mobile version