ಬೆಳಗಾವಿ : ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನ ಹತ್ಯೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾಕು ಇರದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಹೇಳಿಕೆ ನೀಡಿದ್ದಾರೆ.
ಬಂಧಿತ ಆರೋಪಿಗಳನ್ನು ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ್, ಮೌನಪ್ಪ ಮತ್ತು ಸಂಪತ್ ಎಂದು ತಿಳಿದುಬಂದಿದೆ. ಕಾರು ಚಾಲಕ ಬಸವಂತ ಕಡಲೇಕರ್ ಸ್ನೇಹಿತ ಮದನ್ ಈ ಕುರಿತು ದೂರು ನೀಡಿದರು. ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಮದನ್ ನೀಡಿದ ದೂರಿನ ಮೇಲೆ ನಾಲ್ವರು ಆರೋಪಿಗಳನ್ನು ಬಂದಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ತಿಳಿಸಿದರು. ಜನವರಿ 6ರಂದು ಚಾಲಕ ಬಸವನೊಂದಿಗೆ ಚಾಕು ಇರಿದು ನಾಲ್ವರು ಪರಾರಿಯಾಗಿದ್ದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕ ಬಸವಂತಗೆ ಚಾಕು ಇರಿದು ಎಸ್ಕೇಪ್ ಆಗಿದ್ದರು.








