ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ನಗರಸಭೆ ಆಯುಕ್ತೆ ಅಮೃತಾಗೌಡಗೆ ಅಶ್ಲೀಲವಾಗಿ ನಿಂದನೆ ಮಾಡಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜೀವ್ ಗೌಡನಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಹೌದು ನಗರಸಭೆ ಪೌರಾಯುಕ್ತೇ ಅಮೃತಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದು ಅಲ್ಲದೆ, ಜೀವ ಬೆದರಿಕೆ ಹಾಕಿದ್ದ. ಬಳಿಕ ಅಮೃತ ಗೌಡ ಅವರು ರಾಜೇಗೌಡ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಈ ಹಿನ್ನೆಲೆ ಬಂಧನದ ಭೀತಿಯಿಂದ ಇದೀಗ ರಾಜೇಗೌಡ ತಲೆಮರಿಸಿಕೊಂಡಿದ್ದು ಪೊಲೀಸರು ಆತನಿಗಾಗಿ ಇದೀಗ ಶೋಧ ನಡೆಸುತ್ತಿದ್ದಾರೆ.








