ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ತಾಲೂಕು ಕಚೇರಿಯಲ್ಲಿನ ಸಭೆಯ ಬಳಿಕ ಹಿಂದು ಕಾರ್ಯಕರ್ತರು ಪ್ರತಿಭಟನೆಯನ್ನು ವಾಪಸ್ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ಮಂಡ್ಯ ಜಿಲ್ಲೆಯ ಮದ್ದೂರಿ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕೆಲವು ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮದ್ದೂರು ಪಟ್ಟಣದಲ್ಲಿ ನಿಷೇಧಜ್ಞೆ ಜಾರಿಗೆ ಇದ್ದರೂ ಸಹ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ವೇಳೆ ಕೂಡ ಕೆಲವು ಕಡೆಗೆಗಳು ಕಲ್ಲುತೂರಾಟ ನಡೆಸಿದ್ದಾರೆ ಈ ಹಿನ್ನೆಲೆಯಲ್ಲಿ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದರು ಇದೀಗ ಪರಿಸ್ಥಿತಿ ತಿಳಿಕೊಟ್ಟಿದ್ದು ಪ್ರತಿಭಟನೆಯನ್ನು ಹಿಂದೂ ಕಾರ್ಯಕರ್ತರು ಹಿಂಪಡೆದಿದ್ದಾರೆ.
ಈಗ ನಾಳೆ ಮದ್ದೂರು ಪಟ್ಟಣ ಬಂದ್ ಗೆ ಹಿಂದೂ ಸಂಘಟನೆಗಳು ಕರೆ ನೀಡಿವೆ. ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆಯಬಾರದು ನಡೆದು ಹೋಗಿದ್ದು ಶಾಂತಿಯಿಂದ ನಡೆಯುತ್ತಿದ್ದ ಮೆರವಣಿಗೆಯಲ್ಲಿ ಕಲ್ಲುತೂರಾಟ ನಡೆಸಿ ಗಲಭೆ ನಡೆಸಿದ್ದರಿಂದ ನಾಳೆ ಹಿಂದೂ ಸಂಘಟನೆಗಳು ಮದ್ದೂರು ಪಟ್ಟಣ ಬಂದ್ಗೆ ಕರೆ ನೀಡಿವೆ. ಇದೀಗ ತಾಲೂಕು ಕಚೇರಿಯಲ್ಲಿ ಸನ್ದಾನ ಸಭೆ ನಡೆಸಿದ್ದು ಪ್ರತಿಭಟನೆಯನ್ನು ಹಿಂದೂ ಕಾರ್ಯಕರ್ತರು ವಾಪಸ್ ತೆಗೆದುಕೊಂಡಿದ್ದಾರೆ ಆದರೆ ನಾಳೆ ಮದ್ದೂರು ಪಟ್ಟಣ ಬಂದ್ಗೆ ಕರೆ ನೀಡಿದ್ದಾರೆ.