ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಕೈದಿಗಳಿಗೆ ರಾಜಾಜಿತ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರ ಈ ಒಂದು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲು ನಿರ್ಧರಿಸಿದೆ.
ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಗೃಹ ಸಚಿವ ಜಿ ಪರಮೇಶ್ವರ್ ಕಾರಾಗೃಹ ಕಚೇರಿಯಲ್ಲಿ ಜೈಲಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದರು.
ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ, ಸಂದೀಪ್ ಪಾಟೀಲ್ ಅಮರನಾಥ ರೆಡ್ಡಿ ಹಾಗೂ ರಿಷಣ್ ಅವರನ್ನು ಒಳಗೊಂಡ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದ್ದು ತನಿಖೆ ನಡೆಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವಂತೆ ಪರಮೇಶ್ವರ್ ಅವರು ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ್ದಾರೆ.








