ಶಿವಮೊಗ್ಗ : ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕಾಲೇಜು ಆಡಳಿತ ಅಧಿಕಾರಿಯೊಬ್ಬ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಕಾಲೇಜು ಆಡಳಿತ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನರ್ಸಿಂಗ್ ಕಾಲೇಜಿನ ಆಡಳಿತ ಅಧಿಕಾರಿ ವಿರುದ್ಧ ವಿದ್ಯಾರ್ಥಿಗಳು ಇದೀಗ ಆಕ್ರೋಶ ಹೊರ ಹಾಕುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬದ ಖಾಸಗಿ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ಮಂಜುನಾಥ್ ವಿರುದ್ಧ ವಿದ್ಯಾರ್ಥಿನಿಯರು ಈ ಒಂದು ಆರೋಪ ಮಾಡಿದ್ದಾರೆ.
ಆಡಳಿತಾಧಿಕಾರಿಯ ವರ್ತನೆಯ ವಿರುದ್ಧ ಸಚಿವ ಮಧು ಬಂಗಾರಪ್ಪಗೆ ದೂರು ನೀಡಿದ್ದಾರೆ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸಚಿವರು ಸೂಚಿಸಿದ್ದಾರೆ. ಸೊರಬ ಠಾಣೆಯಲ್ಲಿ ಆಡಳಿತಾಧಿಕಾರಿಯ ಮಂಜುನಾಥ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ. ಮಂಜುನಾಥ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.