Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬಂಗಾಳ ಚುನಾವಣೆದ ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲೂ ಮರುಮತದಾನಕ್ಕೆ ಆಯೋಗದ ಆದೇಶ

02/05/2026 10:29 PM

ಸಾಗರ ಶಿಕ್ಷಕರ ಸಂಘದ ಚುನಾವಣೆ; ಮತದಾರ ಪ್ರಭುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ದೇವೇಂದ್ರಪ್ಪ ಕೃತಜ್ಞತೆ

02/05/2026 9:55 PM

ರಾಜ್ಯ ಆರೋಗ್ಯ ಇಲಾಖೆಯ ನೂತನ ನಿರ್ದೇಶಕರಾಗಿ ಡಾ.ಎಂ.ರಜನಿ ನೇಮಕ

02/05/2026 9:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕನ್ನಡ ಹೋರಾಟಗಾರರ ಮೇಲಿನ ಕೇಸುಗಳು ವಾಪಾಸ್: CM ಸಿದ್ದರಾಮಯ್ಯ ಘೋಷಣೆ
KARNATAKA

BIG NEWS : ಕನ್ನಡ ಹೋರಾಟಗಾರರ ಮೇಲಿನ ಕೇಸುಗಳು ವಾಪಾಸ್: CM ಸಿದ್ದರಾಮಯ್ಯ ಘೋಷಣೆ

By kannadanewsnow5702/11/2025 6:13 AM

ಬೆಂಗಳೂರು ನ1: ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ ಎಂದು ಕರೆ ನೀಡಿದರು.

ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಕರೆ ನೀಡಿದರು.

ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ
ಗೋವಿಂದು ಅವರ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದರು.

ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.

ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.

ಬೆಳಗಾವಿ ಕನ್ನಡ ನೆಲ, ಕರ್ನಾಟಕದ ಭಾಗ: ಸಿಎಂ

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ವಾಟಾಳ್ ನಾಗರಾಜ್ ಹಾಗೂ ಕನ್ನಡಪರ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲಾಗುವುದು

– ಮುಖ್ಯಮಂತ್ರಿ @siddaramaiah#ಕನ್ನಡರಾಜ್ಯೋತ್ಸವ #ಕನ್ನಡವೇಸಾರ್ವಭೌಮ #KannadaRajyotsava pic.twitter.com/Ro18UY9qUr

— CM of Karnataka (@CMofKarnataka) November 1, 2025

BIG NEWS: Cases against Kannada activists withdrawn: CM Siddaramaiah's announcement
Share. Facebook Twitter LinkedIn WhatsApp Email

Related Posts

ಸಾಗರ ಶಿಕ್ಷಕರ ಸಂಘದ ಚುನಾವಣೆ; ಮತದಾರ ಪ್ರಭುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ದೇವೇಂದ್ರಪ್ಪ ಕೃತಜ್ಞತೆ

02/05/2026 9:55 PM1 Min Read

ರಾಜ್ಯ ಆರೋಗ್ಯ ಇಲಾಖೆಯ ನೂತನ ನಿರ್ದೇಶಕರಾಗಿ ಡಾ.ಎಂ.ರಜನಿ ನೇಮಕ

02/05/2026 9:41 PM1 Min Read

SHOCKING: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿ ಹಾವು ಕಚ್ಚಿ ಸಾವು

02/05/2026 9:33 PM2 Mins Read
Recent News

BREAKING: ಬಂಗಾಳ ಚುನಾವಣೆದ ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲೂ ಮರುಮತದಾನಕ್ಕೆ ಆಯೋಗದ ಆದೇಶ

02/05/2026 10:29 PM

ಸಾಗರ ಶಿಕ್ಷಕರ ಸಂಘದ ಚುನಾವಣೆ; ಮತದಾರ ಪ್ರಭುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ದೇವೇಂದ್ರಪ್ಪ ಕೃತಜ್ಞತೆ

02/05/2026 9:55 PM

ರಾಜ್ಯ ಆರೋಗ್ಯ ಇಲಾಖೆಯ ನೂತನ ನಿರ್ದೇಶಕರಾಗಿ ಡಾ.ಎಂ.ರಜನಿ ನೇಮಕ

02/05/2026 9:41 PM

SHOCKING: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿ ಹಾವು ಕಚ್ಚಿ ಸಾವು

02/05/2026 9:33 PM
State News
KARNATAKA

ಸಾಗರ ಶಿಕ್ಷಕರ ಸಂಘದ ಚುನಾವಣೆ; ಮತದಾರ ಪ್ರಭುಗಳಿಗೆ ‘ಸ್ವಾಭಿಮಾನಿ ಶಿಕ್ಷಕರ ಬಳಗ’ದ ದೇವೇಂದ್ರಪ್ಪ ಕೃತಜ್ಞತೆ

By kannadanewsnow0902/05/2026 9:55 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ನಿನ್ನೆ ಸಾಂಗವಾಗಿ ನೆರವೇರಿದ್ದು, ಈ ಚುನಾವಣೆಯಲ್ಲಿ ಪಾಲ್ಗೊಂಡು…

ರಾಜ್ಯ ಆರೋಗ್ಯ ಇಲಾಖೆಯ ನೂತನ ನಿರ್ದೇಶಕರಾಗಿ ಡಾ.ಎಂ.ರಜನಿ ನೇಮಕ

02/05/2026 9:41 PM

SHOCKING: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗರ್ಭಿಣಿ ಹಾವು ಕಚ್ಚಿ ಸಾವು

02/05/2026 9:33 PM

ಮದ್ದೂರಿನಲ್ಲಿ ಮೈಸೂರು ದಸರಾ ಮಾದರಿಯ ದೀಪಾಲಂಕಾರ: ಶಾಸಕ ಉದಯ್ ಚಾಲನೆ!

02/05/2026 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.