ಬೆಂಗಳೂರು : ಶಾಸಕ ಮುನಿರತ್ನಗೆ ಮತ್ತೊಂದು ಶಾಕ್, ಜಾತಿ ನಿಂದನೆ ಪ್ರಕರಣ ಸಂಬಂಧ ಅವರನ್ನು ಪ್ರಾಸಿಕ್ಯೂಷನ್ ಗೆ ಒಳಪಡಿಸಲು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಅನುಮತಿ ನೀಡಿದ್ದಾರೆ.
ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ ಸಂಬಂಧ ಒಳಾಡಳಿತ ಇಲಾಖೆ ಆದೇಶ ಹೊರಡಿಸಿದೆ. ಜಾತಿ ನಿಂದನೆ ಆರೋಪ ಸಂಬಂಧ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಸಿಐಡಿಯ ಎಸ್ ಐಟಿಗೆ ವಹಿಸಲಾಗಿತ್ತು. ತನಿಖೆ ನಡೆ ಸಿದ್ದ ಎಸ್‌ಐಟಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿತ್ತು. ಬಳಿಕ ಮುನಿರತ್ನ ಶಾಸಕರಾಗಿರುವ ಕಾರಣ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸ್ಪೀಕರ್ ಮೊರೆ ಹೋಗಿತ್ತು. ಇದೀಗ ಸ್ಪೀಕರ್ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.