ಬೆಂಗಳೂರು : ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಆಯಿತು. ಬಳಿಕ ಏಪ್ರಿಲ್ 17 ರಂದು ಮತ್ತೆ ವಿಶೇಷ ಸಂಪುಟ ಸಭೆ ಕರೆದಿದ್ದು ಈ ಒಂದು ಜಾತಿಗಣತಿ ವರದಿ ಜಾರಿ ಮಾಡುವ ಕುರಿತು ಚರ್ಚಿಸಲಾಗುತ್ತದೆ. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದು, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ಎಂಬ ಡ್ರಾಮಾ ಶುರು ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತಿ ಜಾತಿಯ ಮಧ್ಯ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಸಿಎಂ ರಾಜ್ಯವನ್ನು ಸರ್ವನಾಶ ಮಾಡಲು ಹೊರಟಿದ್ದಾರೆ.ಈಒಂದು ಜಾತಿ ಗಣತ್ಗೆ ಅರ್ಥವೇ ಇಲ್ಲ. 10 ವರ್ಷ ಆಗಿದೆ ಕಾಂತರಾಜು ವರದಿ ಸಿದ್ದವಾಗಿ, ಈಗ 10 ವರ್ಷ ಮುಗಿದಿದೆ. 10 ವರ್ಷದಲ್ಲಿ ಇದೆ ಸಿಎಂ ಸಿದ್ದರಾಮಯ್ಯ ಇದ್ದರೂ ಸಹ ಯಾಕೆ ಜಾರಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಕಳೆದ ಎರಡು ವರ್ಷ ಗ್ಯಾರಂಟಿ ಯೋಜನೆಗಳಿಂದ ಬಡವರ ಆರ್ಥಿಕ ಶಕ್ತಿಯನ್ನು ವೃದ್ಧಿ ಮಾಡಿದ್ದೇವೆ ಅಂತ ಹೇಳ್ತಾರೆ. ಇದೆಲ್ಲ ಕೇವಲ ಜಾತಿ ಜಾತಿ ಮಧ್ಯ ಸಂಘರ್ಷ ಉಂಟು ಮಾಡಲಿಕ್ಕೆ. ಸಿದ್ದರಾಮಯ್ಯ ರಾಜ್ಯವನ್ನು ಸರ್ವನಾಶ ಮಾಡಲಿಕ್ಕೆ ಹೊರಟಿದ್ದಾರೆ. ಜಾತಿ ಎನ್ನುವ ಹೆಸರಿನಲ್ಲಿ. ಜಾತಿ ಸಂಘರ್ಷಕ್ಕೆ ಏನು ವೇದಿಕೆ ಸಿದ್ಧ ಮಾಡಬೇಕು ಅದನ್ನು ಮಾಡಲು ಹೊರಟಿದ್ದಾರೆ. ಅಧಿಕಾರಕ್ಕೆ ಬಂದು ಎರಡು ವರ್ಷ ಆಯ್ತಲ್ಲ ಅವಾಗ ಜಾತಿ ಗಣತಿ ತರಲಿಲ್ಲ. ಸಿಎಂ ಕುರ್ಚಿ ಉಳಿಸಿಕೊಸ್ಕರ ಈ ಡ್ರಾಮಾ ಪ್ರಾರಂಭ ಮಾಡಿದ್ದಾರೆ ಎಂದು ಕಿಡಿ ಕಾರಿದರು.