ಬೆಂಗಳೂರು : ರಾಜ್ಯ ಸರ್ಕಾರವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2025 ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದು, ಸಮೀಕ್ಷಾ ಕಾರ್ಯದ ಅವಧಿ ಶನಿವಾರಕ್ಕೆ ಮುಕ್ತಯವಾಗಿದ್ದು, ಇಂದು ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಜಿಬಿಎ ಪ್ರದೇಶ ಹೊರತುಪಡಿಸಿ ರಾಜ್ಯಾದ್ಯಂತ ಸಮೀಕ್ಷೆಯ 2ನೇ ಗಡುವು ಶನಿವಾರಕ್ಕೆ ಮುಕ್ತಾಯವಾಗಿದ್ದು, ಭಾನುವಾರ ಸಂಜೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಸಮೀಕ್ಷೆ ಮುಕ್ತಾಯ ಇಲ್ಲವೇ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.