ಬೆಂಗಳೂರು : ಬಹುರನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಜಾತಿಗಣತಿ ವರದಿ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.
ಜನವರಿ 9 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಬರೋಬ್ಬರಿ 169 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಿರುವ ವರದಿಯಲ್ಲಿರುವ ಅಂಶಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸದಸ್ಯರೊಂದಿಗೆ ಚರ್ಚಿಸಲಿದ್ದಾರೆ. ಜಾತಿ ಗಣತಿ ವರದಿಯನ್ನು ಸದನದಲ್ಲಿ ಮಂಡಿಸಬೇಕೇ? ಅಥವಾ ಬೇಡವೇ ಎಂಬ ಬಗ್ಗೆಯೂ ಸಂಪುಟ ಸಭೆಯಲ್ಲೇ ತೀರ್ಮಾನಿಸಲಾಗುವುದು.
ಜಾತಿ ಗಣತಿ ಸಲುವಾಗಿ 2014ರಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕಾಂತರಾಜು ನೇಮಕ ಮಾಡಿದ್ದು, 2023ರಲ್ಲಿ ಪೂರ್ಣ ವರದಿಯನ್ನು ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಸರ್ಕಾರಕ್ಕೆ ಸಲ್ಲಿಸಿದ್ದರು.
ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ:ಸಿ.ಎಂ.ಘೋಷಣೆ
ನಾನು ಜಾತಿ ಜನಗಣತಿ ಪರವಾಗಿ ಇದ್ದೇವೆ. ಕಾಂತರಾಜ ಅವರ ವರದಿಯನ್ನು ಮುಂದಿನ ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚಿಸುವ ಉದ್ದೇಶ ಕೂಡ ಇದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.