ಬೆಂಗಳೂರು : ಬೆಂಗಳೂರಲ್ಲಿ ನಿವೃತ್ತ ಡಿಜಿ-ಐಜಿಪಿ ಓಂಪ್ರಕಾಶ್ ಭೀಕರ ಕೊಲೆ ಪ್ರಕರಣದ ಆರೋಪಿ ಅವರ ಪತ್ನಿ ಪಲ್ಲವಿಯನ್ನು ಸಿಸಿಬಿ ಪೊಲೀಸರು 7 ದಿನ ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಸಿಸಿಬಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದ್ದು,ಪಲ್ಲವಿಯನ್ನುವಿಚಾರಣೆಗೆ ಒಳಪಡಿಸಲಾಗಿದೆ. ಈಗಾಗಲೇ ಆರೋಪಿ ಪಲ್ಲವಿ ತಾನೇ ಪತಿ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಿದ್ದಾಗಿ ತಪ್ರೊಪ್ಪಿಕೊಂಡಿದ್ದಾರೆ. ಆದರೆ, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಾರಣ ಅಥವಾ ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಕೊಲೆಗೆ ಕಾರಣ ಕುರಿತು ಆಕೆಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಎಚ್‌ಎಸ್‌ಆರ್ ಲೇಔಟ್‌ನ ನಿವಾಸದಲ್ಲಿ ಏ.20ರಂದು ಮಧ್ಯಾಹ್ನ ಓಂ ಪ್ರಕಾಶ್ ಅವರು ಊಟ ಮಾಡುತ್ತಿದ್ದರು. ಆಗ ಪತ್ನಿ ಪಲ್ಲವಿ ಚಾಕುವಿನಿಂದ ಇರಿದು ಅವರನ್ನು ಕೊಲೆ ಮಾಡಿದ್ದರು. ಬಳಿಕ ಪಲ್ಲವಿ ತನ್ನ ಸ್ನೇಹಿತೆಗೆ ವಿಡಿಯೋ ಕಾಲ್ ಮಾಡಿ ಪತಿಯ ಕೊಲೆ ವಿಚಾರ ತಿಳಿಸಿದ್ದರು. ಸುದ್ದಿತಿಳಿದ ಎಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪಲ್ಲವಿ ಮತ್ತು ಆಕೆಯ ಪುತ್ರಿ ಕೃತಿಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಪಲ್ಲವಿ ತಾನೇ ಕೊಲೆ ಮಾಡಿದ್ದಾಗಿ ತಪ್ರೊಪ್ಪಿಕೊಂಡಿದ್ದರಿಂದ ಬಂಧಿಸಿ ಜೈಲಿಗಟ್ಟಿದ್ದರು.
ಪ್ರಕರಣದ ಗಂಭೀರತೆ ಅರಿತ ನಗರ ಪೊಲೀಸ್ ಆಯುಕ್ತರು ಕೇಸ್‌ನ್ನು ಸಿಸಿಬಿಗೆ ವರ್ಗಾಯಿಸಿದ್ದರು. ಇದರ ಬೆನ್ನಲ್ಲೇ ಎಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರು ಪ್ರಕ ರಣದ ಕಡತಗಳು ಹಾಗೂ ದಾಖಲೆಗಳನ್ನು ಸಿಸಿಬಿ ಪೊಲೀ ಸರಿಗೆ ಹಸ್ತಾಂತರಿಸಿದ್ದರು. ಇದೀಗ ತನಿಖೆ ಆರಂಭಿಸಿರುವ ಸಿಸಿಬಿ ಪೊಲೀಸರು ನ್ಯಾಯಾಂಗ ಬಂಧನದಲ್ಲಿದ್ದ ಪಲ್ಲವಿ ಯನ್ನು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.