Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM

ಪ್ರತಿನಿತ್ಯ ‘ಸಿಹಿ ಗೆಣಸು’ ಸೇವಿಸಿದರೆ ಏನಾಗುತ್ತೆ ಗೊತ್ತೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ತಜ್ಞರು!

19/03/2026 2:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ : ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದಲ್ಲಿ ದೀಪಾಲಂಕಾರ.!
KARNATAKA

BIG NEWS : ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ : ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದಲ್ಲಿ ದೀಪಾಲಂಕಾರ.!

By kannadanewsnow5703/12/2024 11:24 AM

ಬೆಂಗಳೂರು : 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆಯ ಮುಖ್ಯಾಂಶಗಳು ಹೀಗಿವೆ:

* ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು.

* ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸಲು ಸೂಚನೆ ನೀಡಲಾಯಿತು.

* ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಯಿತು.

* ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ ಮಾಡಲಾಗುವುದು.

* ಕಾಂಗ್ರೆಸ್‌ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು.

* ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್‌ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಯಿತು.

• ಕಣಬರಗಿಯಲ್ಲಿ ಗಂಗಾಧರ ರಾವ್‌ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ ಮಾಡಲಾಗುವುದು.

* ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನಿಸಲಾಯಿತು.

* ಅಟನ್‌ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧರಿಸಲಾಯಿತು.

* ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ ಮಾಡಲಾಗುವುದು.

* ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.

* ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ ಮಾಡಲಾಯಿತು.

•ವರ್ಷವಿಡೀ ಎಲ್ಲಾ ಶಾಲೆಗಳಲ್ಲಿ ʻಗಾಂಧಿ ಭಾರತʼ ಅಡಿಯಲ್ಲಿ ʻನಾವು ಮನುಜರುʼ ಕಾರ್ಯಕ್ರಮಗಳ ಆಯೋಜನೆ. ಮಕ್ಕಳಲ್ಲಿ ಗಾಂಧೀಜಿ ವಿಚಾರಧಾರೆ ಬಗ್ಗೆ ಅರಿವು ಮೂಡಿಸಲು ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ ಮಾಡಲು ಸೂಚಿಸಲಾಯಿತು.

* ಗಾಂಧೀಜಿ ಅವರು ಬೋಧಿಸಿದ ಸಪ್ತ ಪಾತಕಗಳು ಹಾಗೂ ಸಂವಿಧಾನದ ಪೀಠಿಕೆಗಳನ್ನು ಮುದ್ರಿಸಿ ಎಲ್ಲಾ ಶಾಲೆಗಳಲ್ಲಿ ವಿತರಣೆ ಮಾಡಲು ನಿರ್ಧರಿಸಲಾಯಿತು.

BIG NEWS : ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ : ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದಲ್ಲಿ ದೀಪಾಲಂಕಾರ.! BIG NEWS: Centenary celebrations of Congress session: Belagavi city to light up on the lines of Mysuru Dasara
Share. Facebook Twitter LinkedIn WhatsApp Email

Related Posts

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM2 Mins Read

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM1 Min Read

BREAKING : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

19/03/2026 2:09 PM1 Min Read
Recent News

ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ: ಒಂದೇ ದಿನದಲ್ಲಿ ಹೂಡಿಕೆದಾರರ 7.6 ಲಕ್ಷ ಕೋಟಿ ಸಂಪತ್ತು ಭಸ್ಮ! | Stock market

19/03/2026 2:43 PM

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

19/03/2026 2:40 PM

ಪ್ರತಿನಿತ್ಯ ‘ಸಿಹಿ ಗೆಣಸು’ ಸೇವಿಸಿದರೆ ಏನಾಗುತ್ತೆ ಗೊತ್ತೇ? ಆರೋಗ್ಯದ ಗುಟ್ಟು ಬಿಚ್ಚಿಟ್ಟ ತಜ್ಞರು!

19/03/2026 2:29 PM

ಯುವಜನತೆಯಲ್ಲಿ ಹೆಚ್ಚಾಗುತ್ತಿದೆ ‘ಸಂಧಿವಾತ’: ‘ಕಠಿಣ ಫಿಟ್ನೆಸ್ ಚಾಲೆಂಜ್‌’ಗಳೇ ಮುಳುವು?

19/03/2026 2:24 PM
State News
KARNATAKA

ಸರ್ಕಾರಿ vs ಖಾಸಗಿ ಆಸ್ಪತ್ರೆ ಲಸಿಕೆ: ನಿಮ್ಮ ಮಗುವಿಗೆ ಯಾವುದು ಸೂಕ್ತ? ಇಲ್ಲಿದೆ ತಜ್ಞರ ಸಲಹೆ

By kannadanewsnow0919/03/2026 2:40 PM KARNATAKA 2 Mins Read

ಮಗು ಹುಟ್ಟಿದ ನಂತರ ಪೋಷಕರಿಗೆ ಎದುರಾಗುವ ಅತಿದೊಡ್ಡ ಜವಾಬ್ದಾರಿಗಳಲ್ಲಿ ‘ಲಸಿಕೆ’ (Vaccination) ಕೂಡ ಒಂದು. ಮಗುವನ್ನು ಮಾರಕ ಕಾಯಿಲೆಗಳಿಂದ ರಕ್ಷಿಸಲು…

‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

19/03/2026 2:19 PM

BREAKING : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಜೆಪಿ ಟಿಕೆಟ್ : ಶಾಸಕ ಯತ್ನಾಳ್ ಹೊಸ ಬಾಂಬ್!

19/03/2026 2:09 PM

ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್

19/03/2026 1:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.