ನವದೆಹಲಿ: ವಿವಾಹಿತ ದಂಪತಿಯ ಪೈಕಿ ಯಾರಿಗಾದರೂ ಒಬ್ಬರಿಗೆ ಆರೋಗ್ಯ ಸಮಸ್ಯೆ ಇದ್ದರೆ ಅಂಥವರು ದಾನಿಗಳಿಂದ ಅಂಡಾಣು ಅಥವಾ ವೀರ್ಯಾಣುವನ್ನು ಪಡೆದು ಬಾಡಿಗೆ ತಾಯ್ತನದ ಮೂಲಕ ಸಂತಾನ ಹೊಂದಲು ಕೇಂದ್ರ ಸರ್ಕಾರ ನಿಯಮಗಳಿಗೆ ತಿದ್ದುಪಡಿ ಮಾಡಿದೆ.
ಅನರ್ಹ ಕಾರ್ಮಿಕ ಕಾರ್ಡ್ಗಳನ್ನು ಗುರುತಿಸಲು ಮನೆ-ಮನೆ ಸಮೀಕ್ಷೆ : ಸಚಿವ ಸಂತೋಷ್ ಲಾಡ್
ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯುವವರು ದಾನಿಗಳಿಂದ ನೆರವು ಪಡೆಯುವುದನ್ನು ನಿಷೇಧಿಸಿ 2023ರ ಮಾರ್ಚ್ನಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದರ ವಿರುದ್ಧ ದೇಶಾದ್ಯಂತ ಮಹಿಳೆಯರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.ಹುಟ್ಟಿನಿಂದಲೇ ಬರುವ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರುಬಾಡಿಗೆ ಅಂಡಾಣುವಿನ ಮೂಲಕ ತಾಯ್ತನ ಹೊಂದಲು ಅವಕಾಶಕಲ್ಪಿಸಬೇಕು ಎಂದು ಒತ್ತಾಯಿಸಿದ್ದರು. ಅದರ ಬೆನ್ನಲ್ಲೇ ಈ ತಿದ್ದುಪಡಿಯಾಗಿದೆ.
‘ಸಚಿವ, ಮಾಜಿ ಸಚಿವ’ರಾಗಲಿ ‘ಪ್ರಕರಣ’ ದಾಖಲಾದ ನಂತ್ರ ‘ಮ್ಯಾಜಿಸ್ಟ್ರೇಟ್’ ಮುಂದೆ ಹಾಜರಾಗಬೇಕು – ಹೈಕೋರ್ಟ್
ಪತಿ ಅಥವಾ ಪತ್ನಿಯ ಪೈಕಿ ಒಬ್ಬರು ಆರೋಗ್ಯ ಸಂಬಂಧಿ ಸಮಸ್ಯೆ ಹೊಂದಿದ್ದಾರೆ ಎಂದು ಜಿಲ್ಲಾ ವೈದ್ಯಕೀಯ ಮಂಡಳಿ ಪ್ರಮಾಣೀಕರಿಸಬೇಕಾಗುತ್ತದೆ. ಅದಾದ ಬಳಿಕ ದಾನಿಗಳಿಂದ ನೆರವು ಪಡೆಯಬಹು ದಾಗಿದೆ. ಈ ಸಂಬಂಧ 2022ರ ಬಾಡಿಗೆ ತಾಯ್ತನ ನಿಯಮಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದ್ದು, ಬುಧವಾರ ಅಧಿಸೂಚನೆ ಹೊರಡಿಸಿದೆ.ಹಾಗೊಂದು ವೇಳೆ, ದಂಪತಿ ಪೈಕಿ ಇಬ್ಬರಿಗೂ ಆರೋಗ್ಯ ಸಮಸ್ಯೆ ಇದ್ದರೆ ಮತ್ತು ಅಂಡಾಣು-ವೀರ್ಯಾಣು ಉತ್ಪತ್ತಿ ಅವರಲ್ಲಿ ಇಲ್ಲದಿದ್ದರೆ ಅವರು ಬಾಡಿಗೆ ತಾಯ್ತನದ ಮೊರೆ ಹೋಗುವಂತಿಲ್ಲ ಎಂದು ನಿಯಮ ಹೇಳುತ್ತದೆ.
BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಖಾಸಗಿ ಬಸ್ ಹರಿದು ಬೈಕ್ ಸವಾರ ಸಾವು