ನವದೆಹಲಿ : ಪ್ರತಿ ವರ್ಷ ಸೆಪ್ಟೆಂಬರ್ 17 ಅನ್ನು ‘ಹೈದರಾಬಾದ್ ವಿಮೋಚನಾ ದಿನ’ ಎಂದು ಆಚರಿಸುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ.
ಆಗಸ್ಟ್ 15, 1947 ರಂದು ಭಾರತದ ಸ್ವಾತಂತ್ರ್ಯದ ನಂತರ 13 ತಿಂಗಳ ಕಾಲ ಹೈದರಾಬಾದ್ ಸ್ವಾತಂತ್ರ್ಯವನ್ನು ಪಡೆಯಲಿಲ್ಲ ಮತ್ತು ಅದು ನಿಜಾಮರ ಆಳ್ವಿಕೆಯಲ್ಲಿತ್ತು ಎಂದು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.
ಸೆಪ್ಟೆಂಬರ್ 17, 1948 ರಂದು ‘ಆಪರೇಷನ್ ಪೋಲೊ’ ಎಂಬ ಪೊಲೀಸ್ ಕ್ರಮದ ನಂತರ ಈ ಪ್ರದೇಶವನ್ನು ನಿಜಾಮರ ಆಳ್ವಿಕೆಯಿಂದ ಮುಕ್ತಗೊಳಿಸಲಾಯಿತು.
ಈಗ ಹೈದರಾಬಾದ್ ವಿಮೋಚನೆ ಮಾಡಿದ ಹುತಾತ್ಮರನ್ನು ಸ್ಮರಿಸಲು ಮತ್ತು ಯುವಕರ ಮನಸ್ಸಿನಲ್ಲಿ ದೇಶಭಕ್ತಿಯ ಜ್ವಾಲೆಯನ್ನು ತುಂಬಲು, ಭಾರತ ಸರ್ಕಾರವು ಪ್ರತಿವರ್ಷ ಸೆಪ್ಟೆಂಬರ್ 17 ನೇ ದಿನವನ್ನು ‘ಹೈದರಾಬಾದ್ ವಿಮೋಚನಾ ದಿನ’ ಎಂದು ಆಚರಿಸಲು ನಿರ್ಧರಿಸಿದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.