ಬೆಂಗಳೂರು : ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ಸೂಕ್ಷ್ಮವಾಗಿ, ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ.
ಏಪ್ರಿಲ್ 16ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮೊದಲು ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇರುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ಬೇಕಾಗಿರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವುದು ಮತ್ತು ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿಗಳಿಂದ ಘೋಷಿಸುವುದು. ವಿಜ್ಞಾನ ವಿಷಯವನ್ನು ಬೋಧಿಸುವ ಉಪನ್ಯಾಸಕರು, ಶಿಕ್ಷಕರು ಹಾಗೂ ಸಂಬಂಧಿಕರ, ಸ್ವಂತ ಮಕ್ಕಳು ಈ ಪರೀಕ್ಷೆಗೆ ಹಾಜರಾಗುತ್ತಿದ್ದರೆ ಅಂತಹ ಉಪನ್ಯಾಸಕರು, ಶಿಕ್ಷಕರನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸುವಂತೆ ಇಲ್ಲ.
#UGCET-25 ಇದೇ 15, 16, 17ರಂದು ಸಿಇಟಿ ನಡೆಯಲಿದ್ದು, ಬೆಂಗಳೂರು ನಗರದ ಉಪ ಮುಖ್ಯ ಅಧೀಕ್ಷಕರಿಗೆ #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಪರೀಕ್ಷೆ ಸಂದರ್ಭದಲ್ಲಿ ಏನೆಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ವಿವರಿಸಿದರು.@CMofKarnataka @drmcsudhakar pic.twitter.com/HrcQZpsUKV
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 11, 2025
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನುಗಳನ್ನು ತರುವುದು ಹಾಗೂ ಕೈ ಗಡಿಯಾರವನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದುನ್ನು ಹಾಗೂ ಕೈ ಗಡಿಯಾರ ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಮುಖ್ಯ ಅಧೀಕ್ಷಕರು ಬೇಸಿಕ್ ಸೆಟ್ ಉಪಯೋಗಿಸಲು ಅವಕಾಶ ನೀಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾ ಸಿಸಿಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸುವುದು ಮತ್ತು ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಬೇಕಿದೆ.
#UGCET-25 ಪರೀಕ್ಷೆಗೆ ಪ್ರವೇಶ ಪತ್ರವನ್ನು #KEA ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ #OMR ಶೀಟು ನೀಡಲಾಗುವುದು. ಏ.15, 16 & 17ರಂದು ಪರೀಕ್ಷೆ ನಡೆಯಲಿದೆ.https://t.co/Q0EYWIe0nt@CMofKarnataka @drmcsudhakar
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 6, 2025