ಚನ್ನಪಟ್ಟಣ : ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗಿಂತ ಹೆಚ್ಚು ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸಮಬಲದ ಹೋರಾಟ ನಡೆಸುತ್ತಿದ್ದಾರೆ.
ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು ಮೊದಲ ಸುತ್ತಿನಲ್ಲಿ ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಭಾರಿ ಮುನ್ನಡೆ ಸಾಧಿಸಿದ್ದರು. ಇದೀಗ ಎರಡನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ 31 ಮತಗಳ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಈ ಒಂದು ಹಾವು ಏಣಿಯ ಆಟದಲ್ಲಿ ಕೊನೆಗೆ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಎನ್ನುವುದು ಕೊನೆಯ ಹಂತದಲ್ಲಿ ತಿಳಿದು ಬರುತ್ತದೆ.
ಇನ್ನು ಅದೇ ರೀತಿಯಾಗಿ ಸಂಡೂರು ವಿಧಾನಸಭಾ ಉಪಚುನಾವಣೆಯ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಣ ಅವರ ವಿರುದ್ಧ ಆರಂಭಿಕ ಮುನ್ನಡೆಯನ್ನು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.








