ಬೆಂಗಳೂರು: ಅಂತೂ ಇಂತೂ ಅಳೆದು ತೂಗಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೇರಿ, ಜೊತೆಗೆ ಕಾರ್ಯಕರ್ತರ ಸಭೆಯ ಬಳಿಕ ಅವರ ಒತ್ತಡದ ಕಾರಣದಿಂದಾಗಿ ಅಂತಿಮವಾಗಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಲು ನಿರ್ಧರಿಸಲಾಗಿದೆ. ಅವರು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದರು.
ಈ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಉಮೇಧುವಾರಿಕೆಯನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.