ಬೆಂಗಳೂರು : ಮುಖ್ಯಮಂತ್ರಿ ಕುರ್ಚಿ ಕುರಿತು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಮಹತ್ವದ ಹೇಳಿಕೆ ನೀಡಿದ್ದು, ಅಧಿಕಾರದಲ್ಲಿರುವ ಯಾರೂ ಬೇಕಾದರೂ ಟವೆಲ್ ಹಾಕಬಹುದು. ನಮ್ಮಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹತೆ ಇರುವವರು ತುಂಬಾ ಜನರಿದ್ದಾರೆ ಎಂದು ತಿಳಿಸಿದ್ದಾರೆ.
ಮುಡಾ ಹಗರಣ ಬಯಲಾಗಿರುವುದು ಮುಖ್ಯಮಂತ್ರಿಗಳ ಕುರ್ಚಿಗೆ ಟವೆಲ್ ಹಾಕಿದವರಿಂದ ಎಂಬ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಅಧಿಕಾರದಲ್ಲಿರುವ ಯಾರೂ ಬೇಕಾದರೂ ಸಿಎಂ ಕುರ್ಚಿಗೆ ಟವೆಲ್ ಹಾಕಬಹುದು. ನಮ್ಮಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹತೆ ಇರುವವರು ತುಂಬಾ ಜನರಿದ್ದಾರೆ. ಅರ್ಹತೆ ಇರುವವರು ಮುಖ್ಯಮಂತ್ರಿ ಆಗಲು ಟವೆಲ್ ಹಾಕುತ್ತಾರೆ. ಟವೆಲ್ ಹಾಕಿದವರು ಯಾರು ಎಂದು ಹೆಚ್.ಡಿ.ಕುಮಾರಸ್ವಾಮಿ ಕೇಳಿ ಎಂದು ಹೇಳಿದ್ದಾರೆ.
ಸದನದಲ್ಲಿ ಕಾನೂನು ಬಾಹಿರ ನಿಯಮದ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿತ್ತು ಅಂತ ಹೇಳಿದರು. ಇನ್ನೂ ಲೋಕಸಭೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ಕಡಿಮೆ ಸೀಟು ಗಳಿಸಿದ್ದು, ಇದನ್ನು ಸಹಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಅಂತ ತಿಳಿಸಿದರು. ಯಾವುದೇ ಆಧಾರಗಳಿಲ್ಲದೇ ಇವರುಗಳು ಆರೋಪ ಮಾಡುತ್ತಿದ್ದಾರೆ ಅಂತ ತಿಳಿಸಿದರು. ಸಿಎಂಗೆ ಕಪ್ಪು ಚುಕ್ಕೆ ತರುವುದಕ್ಕೆ ಇವರೆಲ್ಲ ಪಿತೂರಿ ನಡೆಸುತ್ತಿದ್ದಾರೆ ಅಂಥ ತಿಳಿಸಿದರು.
ಇನ್ನೂ ತಮ್ಮ ವಿರುದ್ದ ಕೇಳಿ ಬಂದಿರುವ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿದ ಅವರು ಪಿಟಿಸಿಎಲ್ ಕಾಯ್ದೆ ಅನ್ವಯ ಜಮೀನು ಇಲ್ಲ, ಇದು ಪಿತ್ರರ್ಜಿತ ಆಸ್ತಿಯಾಗಿದ್ದು, ಈ ಜಮೀನ ಮಾಲೀಕ ನಿಂಗ ಬಿನ್ ಜವರ 2-08-1935ರಲ್ಲಿ ಮೈಸೂರು ತಾಲೂಕು ಕಚೇರಿಗೆ ಒಂದು ಅರ್ಜಿಯನ್ನು ನೀಡಿದ್ದಾರೆ ಅದರ ಅನ್ವಯ ಹರಾಜು ನಡೆಯುತ್ತದೆ. ಆಗ ಹರಾಜಿನ ಮೊತ್ತು ಮೂರು ರೂ ಆಗಿರುತ್ತದೆ. ಹರಾಜಿನಲ್ಲಿ ಒಂದು ರೂಗೆ ನಿಂಗ ಬಿನ್ ಜವರ 03-10-1935 ರಂದು ಪಡೆದುಕೊಂಡಿರುತ್ತಾರೆ. ಇದು ಹರಾಜಿನಲ್ಲಿ ಬಂದಿರುವ ಆಸ್ತಿಯಾಗಿದ್ದು, ಇದು ಪಿತ್ರರ್ಜಿತ ಆಸ್ತಿಯಾಗಿದೆ ಅಂತ ತಿಳಿಸಿದರು. ಇದು ಪಿಟಿಸಿಎಲ್ ಕಾಯ್ದೆಗೆ ಒಳಪಡುವುದಿಲ್ಲ ಅಂತ ತಿಳಿಸಿದರು.