ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ ಇಬ್ಬರು ಪ್ರವಾಸಿಗರು ನೀರು ಪಾಲಾಗಿ ಸಾವನಪ್ಪಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಬಳಿ ನಡೆದಿದೆ.
ಮೃತರನ್ನು ಬೆಂಗಳೂರು ಮೂಲದ ಜಗದೀಶ್ ಹಾಗು ಛೋಟಾ ಎಂದು ತಿಳಿದುಬಂದಿದೆ. 7 ಸ್ನೇಹಿತರು ಸೇರಿ ಚಿಕ್ಕಮಂಗಳೂರು ಜಿಲ್ಲಾ ಪ್ರವಾಸಕ್ಕೆ ಬಂದಿದ್ದಾಗ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ, ಬೆಂಗಳೂರಿನಿಂದ ಸ್ನೇಹಿತರ ಜೊತೆಗೆ ಜಗದೀಶ್ ಮತ್ತು ಚೋಟ ಎನ್ನುವ ಯುವಕರು ಪ್ರವಾಸಕ್ಕೆ ಬಂದಿದ್ದರು. ಘಟನೆ ಕುರಿತಂತೆ ಕಳಸ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.