Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ರೇಲ್-ಇರಾನ್ ಸಂಘರ್ಷದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಇರಾನ್ ಸರ್ವೋಚ್ಚ ನಾಯಕ ಖಮೇನಿ

06/07/2025 9:07 AM

BIG NEWS : ಬಾಲ್ಯವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧ : 1 ಲಕ್ಷ ರೂ. ದಂಡ, ಜೈಲು ಶಿಕ್ಷೆ ಫಿಕ್ಸ್.!

06/07/2025 8:52 AM

ದಲಾಯಿ ಲಾಮಾ 90ನೇ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ | Dalai Lama

06/07/2025 8:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಾಲ್ಯವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧ : 1 ಲಕ್ಷ ರೂ. ದಂಡ, ಜೈಲು ಶಿಕ್ಷೆ ಫಿಕ್ಸ್.!
KARNATAKA

BIG NEWS : ಬಾಲ್ಯವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧ : 1 ಲಕ್ಷ ರೂ. ದಂಡ, ಜೈಲು ಶಿಕ್ಷೆ ಫಿಕ್ಸ್.!

By kannadanewsnow5706/07/2025 8:52 AM

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ, ಬೇವೂರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬೇವೂರು ಇವರ ಸಂಯುಕ್ತಾಶ್ರಯದಲ್ಲಿ ಜುಲೈ 04 ರಂದು ಕಾಲೇಜಿನ ಸಭಾಭವನದಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ ಅವರು ಮಾತನಾಡಿ, ಬಾಲ್ಯವಿವಾಹ ನಮ್ಮ ಸಮಾಜದ ಒಂದು ಸವಾಲಾಗಿದೆ. ಇದರ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ ಯುವಜನತೆಗೆ ಮತ್ತು ಪಾಲಕರಿಗೆ ಅರಿವು ಮೂಡಿಸಬೇಕು. ಬಾಲ್ಯವಿವಾಹ ಎಂದರೆ ಯಾವುದೇ 18 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಅಥವಾ 21 ವರ್ಷದೊಳಗಿನ ಗಂಡುಮಕ್ಕಳಿಗೆ ಮದುವೆ ಮಾಡುವುದಕ್ಕೆ ಬಾಲ್ಯವಿವಾಹ ಎಂದು ಕರೆಯುತ್ತಾರೆ. ಬಾಲ್ಯವಿವಾಹಕ್ಕೆ ಕಾರಣಗಳೆಂದರೆ ಬಡತನ, ಅನಕ್ಷರತೆ, ಮೂಢನಂಬಿಕೆ, ಬಾಲ್ಯವಿವಾಹದ ದುಷ್ಪರಿಣಾಮದ ಬಗ್ಗೆ ಅರಿವು ಇಲ್ಲದೇ ಇರುವುದು, ರಕ್ತ ಸಂಬAಧವನ್ನು ಉಳಿಸಿಕೊಳ್ಳುವುದು, ಕುಟುಂಬ ಆಸ್ತಿಯನ್ನು ಉಳಿಸಿಕೊಳ್ಳುವುದು, ಪಾಲಕರು ಮದುವೆ ಮಾಡಿ ತಮ್ಮ ಜವಾಬ್ದಾರಿಯನ್ನು ಕಳೆದುಕೊಳ್ಳುವುದು, ಸಾಮೂಹಿಕ ವಿವಾಹದಲ್ಲಿ ಕಡಿಮೆ ಖರ್ಚು ಆಗುತ್ತದೆ ಎಂಬ ಭಾವನೆ, ವೃದ್ಧರು ಹಾಗೂ ಅನಾರೋಗ್ಯದ ಹಿರಿಯರ ಆಸೆ ಈಡೇರಿಸುವ ಉದ್ದೇಶದಿಂದ ಬಾಲ್ಯವಿವಾಹ ಮಾಡುತ್ತಾರೆ. ಬಾಲ್ಯವಿವಾಹ ಮಾಡುವುದರಿಂದ ಯುವಜನತೆಯ ಆರೋಗ್ಯ ಮತ್ತು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಬಾಲ್ಯವಿವಾಹ ಮಾಡುವುದರಿಂದ ಇಬ್ಬರಿಗೂ ವಯಸ್ಸಿಗೆ ಮೀರಿದ ಜವಾಬ್ದಾರಿ ಹೊರಿಸಿದಂತಾಗುತ್ತದೆ. ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗುವುದರಿಂದ ಗರ್ಭಕೋಶದ ಬೆಳವಣಿಗೆ ಪೂರ್ಣಗೊಳ್ಳದೆ ಹೆರಿಗೆ ಸಮಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ. ವಿಕಲಾಂಗ ಮಕ್ಕಳ ಜನನ ಉಂಟಾಗುತ್ತದೆ. ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಹಾಗೂ ಬಲತ್ಕಾರಕ್ಕೆ ಒಳಗಾಗುತ್ತಾರೆ. ಲೈಂಗಿಕ ಖಾಯಿಲೆಗಳಿಂದ ಹೆಚ್.ಐ.ವಿ/ಏಡ್ಸ್ ರೋಗಕ್ಕೆ ಗುರಿಯಾಗುವ ಸಾಧ್ಯತೆ ಇರುತ್ತದೆ ಹಾಗೂ ರಕ್ತಹೀನತೆ ಉಂಟಾಗುತ್ತದೆ ಮತ್ತು ಕಡಿಮೆ ತೂಕದ ಮಗುವಿನ ಜನನವಾಗುವ ಸಾಧ್ಯತೆ ಇರುತ್ತದೆ. ಶಿಶುಗಳ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳಲ್ಲಿ/ವಾರ್ಡ್ಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತು, ನಿರಂತರವಾಗಿ ಪಾಲಕರಿಗೆ ಅರಿವು ಮೂಡಿಸಬೇಕು. ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಬಾಲ್ಯವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಮಾಡುವವರಿಗೆ ಮತ್ತು ಮಾಡಿಸುವವರಿಗೆ ದಂಡ ಮತ್ತು ಜೈಲುಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಕೊಪ್ಪಳವನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ವಿದ್ಯಾರ್ಥಿಗಳು ನಾಯಕತ್ವ ವಹಿಸಿಕೊಂಡು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ ಅವರು ಬಾಲ್ಯವಿವಾಹ ಕಂಡುಬAದಲ್ಲಿ 1098 ಸಂಖ್ಯೆಗೆ ಕರೆಮಾಡಿ ಬಾಲ್ಯ ವಿವಾಹ ನಿಯಂತ್ರಣ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಎಸ್.ಟಿ.ಎಸ್. ಕೃಷ್ಣಾಜೀ ಅವರು ಮಾತನಾಡಿ, ಕ್ಷಯರೋಗ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ವಿವರಿಸಿದರು. ಸಮುದಾಯ ಆರೋಗ್ಯಾಧಿಕಾರಿ ಮಂಜುಳಾ ಅವರು ಅಸಾಂಕ್ರಾಮಿಕ ರೋಗಗಳು, ಮಳೆಗಾಲದಲ್ಲಿ ಸೋಂಕಿತ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಚಿಕನ್ಗುನ್ಯಾ, ಮಲೇರಿಯಾ, ಮೆದುಳುಜ್ವರ, ಆನೆಕಾಲುರೋಗ ಹರಡದಂತೆ, ತಾಯಿ ಮಕ್ಕಳ ಆರೋಗ್ಯ ರಕ್ಷಣೆ, ಕುಟುಂಬ ಕಲ್ಯಾಣ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಇವರು ಬಾಲ್ಯ ವಿವಾಹ ತಡೆಗಟ್ಟುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಇಲಾಖೆಗಳು ಜಾಗೃತಿ ಮೂಡಿಸಿದರೆ ಸಾಲದು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಬಲವಾದ ಕಾನೂನುಗಳಿಂದ ಮಾತ್ರ ಬಾಲ್ಯ ವಿವಾಹ ನಿಷೇಧ ಮಾಡಲು ಸಾಧ್ಯ, ಆರೋಗ್ಯ ಇಲಾಖೆಯ ಜಾಗೃತಿ ಕಾರ್ಯಕ್ರಮಗಳು ಹದಿ-ಹರೆಯದವರಿಗೆ ಬಹಳಷ್ಟು ಉಪಯುಕ್ತವಾಗಿವೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹ ಉಪನ್ಯಾಸಕರಾದ ಹೆಚ್.ಎ ಹಿರೇಮಠ, ಅತಿಥಿ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರಾದ ಅನ್ನಪೂರ್ಣ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

BIG NEWS: Child marriage is a punishable offence: Rs. 1 lakh fine jail term fixed!
Share. Facebook Twitter LinkedIn WhatsApp Email

Related Posts

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ : ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

06/07/2025 8:49 AM2 Mins Read

Rain Alert : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ , ಆರೆಂಜ್ ಅಲರ್ಟ್’ ಘೋಷಣೆ

06/07/2025 8:42 AM1 Min Read

BIG NEWS : ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ : CM ಸಿದ್ದರಾಮಯ್ಯ

06/07/2025 8:35 AM2 Mins Read
Recent News

ಇಸ್ರೇಲ್-ಇರಾನ್ ಸಂಘರ್ಷದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಇರಾನ್ ಸರ್ವೋಚ್ಚ ನಾಯಕ ಖಮೇನಿ

06/07/2025 9:07 AM

BIG NEWS : ಬಾಲ್ಯವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧ : 1 ಲಕ್ಷ ರೂ. ದಂಡ, ಜೈಲು ಶಿಕ್ಷೆ ಫಿಕ್ಸ್.!

06/07/2025 8:52 AM

ದಲಾಯಿ ಲಾಮಾ 90ನೇ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ | Dalai Lama

06/07/2025 8:51 AM

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ : ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

06/07/2025 8:49 AM
State News
KARNATAKA

BIG NEWS : ಬಾಲ್ಯವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧ : 1 ಲಕ್ಷ ರೂ. ದಂಡ, ಜೈಲು ಶಿಕ್ಷೆ ಫಿಕ್ಸ್.!

By kannadanewsnow5706/07/2025 8:52 AM KARNATAKA 2 Mins Read

ಕೊಪ್ಪಳ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ…

NEET ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಗಮನಕ್ಕೆ : ಜು.8ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ

06/07/2025 8:49 AM

Rain Alert : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ , ಆರೆಂಜ್ ಅಲರ್ಟ್’ ಘೋಷಣೆ

06/07/2025 8:42 AM

BIG NEWS : ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ : CM ಸಿದ್ದರಾಮಯ್ಯ

06/07/2025 8:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.