ಬೀದರ್ : ಬೀದರ್ ನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು ಈ ಹಿನ್ನಲೆಯಲ್ಲಿ ಇಂದು ಬೀದರ್ ಜಿಲ್ಲೆಗೆ ಸಿಐಡಿ ತಂಡ ಭೇಟಿ ನೀಡಲಿದೆ.
ಇಂದು ಬೀದರ್ ಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಲಿದೆ. ಸಿಐಡಿ ಎಸ್ ಪಿ ಸುಲೇಮಾನ್ ತಹಶೀಲ್ದಾರ್ ನೇತೃತ್ವದ ತನಿಖಾ ತಂಡ ಬೀದರ್ಗೆ ಭೇಟಿ ನೀಡಲಿದೆ. ಆತ್ಮಹತ್ಯೆ ಮಾಡಿಕೊಂಡ ಸಚಿನ್ ಪಂಚಾಳ್ ನಿವಾಸಕ್ಕೆ ಸಿಐಡಿ ತನಿಖೆ ತಂಡ ಭೇಟಿ ನೀಡುವ ಸಾಧ್ಯತೆ ಇದ್ದು, ಕುಟುಂಬ ಸದಸ್ಯರು ಹೇಳಿಕೆಯನ್ನು ದಾಖಲಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನೊಂದು ಕಡೆಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಸಚಿನ್ ಪಂಚಾಳ್ ಗುತ್ತಿಗೆದಾರನೆ ಅಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದು, ಆತ ಗುತ್ತಿಗೆದಾರ ಇರುವಂತಹ ದಾಖಲೆಗಳು ಎಲ್ಲಿಯೂ ಕೂಡ ಇಲ್ಲ ಎಂದು ತಿಳಿಸಿದ್ದಾರೆ. ಇನ್ನು ಸಚಿನ್ ಸಹೋದರಿ ಸುರೇಖಾ ಅವರು ರಾಜ್ಯ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದು, ಹಾಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಈ ಕುರಿತು ಪತ್ರ ಬರೆಯಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.