ಬೆಂಗಳೂರು : ಬೆಂಗಳೂರಿನ ರಸ್ತೆ ಗುಂಡಿಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು ಒಂದು ವಾರದೊಳಗೆ ಬೆಂಗಳೂರಿನಲ್ಲಿರುವ ಎಲ್ಲಾ ಗುಂಡಿಗಳನ್ನು ಪುಟ್ಟಿ ಎಂದು ಜಿಬಿಎ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ.
ಹೌದು ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಂಗಳೂರು ರಸ್ತೆಗಳ ಗುಂಡಿ ಮುಚ್ಚಲು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಒಂದು ವಾರದ ಗಡುವು ನೀಡಿದ್ದಾರೆ. ಒಂದು ವಾರದೊಳಗೆ ಎಲ್ಲಾ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರಿಗೆ ಸೂಚನೆ ನೀಡಿದ್ದಾರೆ. ರಸ್ತೆಗಳ ಸ್ಥಿತಿಯನ್ನು ಸುಧಾರಿಸಲು ಹೊಸ ಟಾರ್ ಹಾಕುವಂತೆಯೂ ಅವರು ನಿರ್ದೇಶನ ನೀಡಿದ್ದಾರೆ.
ಬೆಂಗಳೂರಿನ ಅಭಿವೃದ್ಧಿಗಾಗಿ ಸರ್ಕಾರ ಇಂದಿಗೂ ಹೊಡಿಕೆ ಮಾಡುತ್ತಿದೆ. ಮುಂದೆಯೂ ಮಾಡುತ್ತದೆ. ವಿಶೇಷವಾಗಿ ಬೆಂಗಳೂರಿನ ಜನಸಂಖ್ಯೆಯು ವೇಗವಾಗಿ ಬೆಳೆಯುತ್ತಿರುವುದರಿಂದ ಉತ್ತಮ ಮೂಲಸೌಕರ್ಯಗಳ ಅಗತ್ಯ ಇದೆ ಎಂದು ಹೇಳಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ತೆರಿಗೆ ಮತ್ತು ಹಣಕಾಸು ನಿರ್ವಹಣೆ ಬಗ್ಗೆಯೂ ಟೀಕಿಸಿದ್ದಾರೆ. ಬೆಂಗಳೂರು ಮೆಟ್ರೋಗೆ ಶೇ. 87 ರಷ್ಟು ಹಣ ರಾಜ್ಯದ ತೆರಿಗೆದಾರರಿಂದ ಬಂದಿದೆ. ಜಿಎಸ್‌ಟಿ ನೀತಿಯಲ್ಲಿನ ಬದಲಾವಣೆಗಳಿಂದಾಗಿ ಕರ್ನಾಟಕ 15 ಸಾವಿರ ಕೋಟಿ ನಷ್ಟ ಅನುಭವಿಸಿದೆ ಎಂದು ಹೇಳಿದ್ದಾರೆ.