ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದು, ಎರಡು ವರ್ಷದಲ್ಲಿ ಭರ್ತಿ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದು, ಎರಡು ವರ್ಷದಲ್ಲಿ ಭರ್ತಿ ಮಾಡಲಾಗುವುದು. ಇದರಲ್ಲಿ 1 ಲಕ್ಷ ಹುದ್ದೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕನ್ನಡ ನಾಡು ಪುಣ್ಯದ ಬೀಡು. ನಮ್ಮದು ಅತ್ಯಂತ ಸಂಪದ್ಬರಿತವಾರ ನಾಡು. ಕರ್ನಾಟಕ ಏಕೀಕರಣ ಹೋರಾಟವನ್ನು ಯಾರು ಮರೆಯವಂತಿಲ್ಲ. ಮದ್ರಾಸ್ ಕರಾವಳಿ ಮಧ್ಯ ಕರ್ನಾಟಕ ಎಂದು ಹಂಚಿಹೋಗಿದ್ದ ಕನ್ನಡ ನಾಡನ್ನು ಹಾಲೂರು ವೆಂಕಟರಾಯರು ಹೋರಾಟ ಮಾಡಿ ಕರ್ನಾಟಕ ಏಕೀಕರಣ ಮಾಡಿದರು. ಹೋರಾಟದಲ್ಲಿ ಹಲವು ಮಹನೀಯ ಶ್ರಮವಿದೆ ಎಂದರು. ಶಿಕ್ಷಣ ಆರೋಗ್ಯ, ಉದ್ಯೋಗದ ಜೊತೆಗೆ ಭಾರತದ ಭವಿಷ್ಯವನ್ನೂ ನಿರ್ಮಾಣ ಮಾಡುವ ಶಕ್ತಿ ಕ್ನಾಟಕಕ್ಕೆ ಇದೆ. ಕರುನಾಡಿನಲ್ಲಿ ನಾವು ಹುಟ್ಟಿದ್ದೇವೆ ಎಂದರೆ ಅದು ಏಳು ಜನ್ಮದ ಪುಣ್ಯದ ಫಲ. ಕರ್ನಾಟಕದಲ್ಲಿ ಹುಟ್ಟಲು ಏಳು ಜನ್ಮದ ಪುಣ್ಯಬೇಕು ಎಂದು ಹೇಳಿದ್ದಾರೆ.