Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

BIG NEWS : ಆಸ್ತಿ ಮಾಲೀಕರಿಗೆ ಸಿಎಂ ಡಿಕೆಶಿ ಗುಡ್ ನ್ಯೂಸ್ : ರಾಜ್ಯಾದ್ಯಂತ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ.!

​ಯುದ್ಧ ವಿರಾಮಕ್ಕೆ ಒಪ್ಪಿದ ಇಸ್ರೇಲ್ ಮತ್ತು ಲೆಬನಾನ್: ಗಡಿಯಲ್ಲಿ ಶಾಂತಿಯ ನಿರೀಕ್ಷೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಆಸ್ತಿ ಮಾಲೀಕರಿಗೆ ಸಿಎಂ ಡಿಕೆಶಿ ಗುಡ್ ನ್ಯೂಸ್ : ರಾಜ್ಯಾದ್ಯಂತ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ.!
KARNATAKA

BIG NEWS : ಆಸ್ತಿ ಮಾಲೀಕರಿಗೆ ಸಿಎಂ ಡಿಕೆಶಿ ಗುಡ್ ನ್ಯೂಸ್ : ರಾಜ್ಯಾದ್ಯಂತ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ.!

By kannadanewsnow57

ಬೆಂಗಳೂರು: ವಿಧಾನಸೌಧದಲ್ಲಿ ಬುಧವಾರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ, ಮೊದಲ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿ ಮಾಧ್ಯಮಗೋಷ್ಠಿ ನಡೆಸಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಯುವ ಸಬಲೀಕರಣಕ್ಕಾಗಿ ಮಹತ್ವದ 6 ಬಂಪರ್ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಕಳೆದ ಮೂರು ವರ್ಷಗಳ ಪ್ರಗತಿಯ ವೇಗವನ್ನು ಮುಂದುವರಿಸಿಕೊಂಡು, ಜನರಿಗೆ ತ್ವರಿತ ಸೇವೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸುತ್ತಾ ಈ ಕೆಳಗಿನ ಐತಿಹಾಸಿಕ ತೀರ್ಮಾನಗಳನ್ನು ಅಧಿಕೃತವಾಗಿ ಘೋಷಿಸಿದರು.

ಅಧಿಕೃತವಾಗಿ ಘೋಷಿಸಲಾದ 6 ಬಂಪರ್ ಯೋಜನೆಗಳ ವಿವರಗಳು:
1. ಉಚಿತ ಬಸ್ ಪಾಸ್ ಸೌಲಭ್ಯ ಎಲ್ಲಾ ವಿದ್ಯಾರ್ಥಿಗಳಿಗೆ ವಿಸ್ತರಣೆ:
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕಲಿಯುತ್ತಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲಾಗುವುದು. ಈ ಮೂಲಕ ಕಡಿಮೆ ಆದಾಯ ಮೂಲದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಸಾರಿಗೆ ವೆಚ್ಚವನ್ನು ಗಣನೀಯವಾಗಿ ತಗ್ಗಿಸಲು ಸರ್ಕಾರ ನೇರ ನೆರವು ನೀಡಲಿದೆ.

2. ಯುವ ಉದ್ಯೋಗ ಸೇತು (ಖಾಸಗಿ ಉದ್ಯೋಗ ವಿನಿಮಯ ವ್ಯವಸ್ಥೆ):
ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವುದರ ಜೊತೆಗೆ, ಯುವ ಉದ್ಯೋಗಾಕಾಂಕ್ಷಿಗಳು ಖಾಸಗಿ ವಲಯದಲ್ಲಿ ಸೂಕ್ತ ಉದ್ಯೋಗಾವಕಾಶಗಳನ್ನು ಪಡೆಯಲು ಅನುವಾಗುವಂತೆ ಉದ್ಯೋಗದಾತರೊಂದಿಗೆ ನೇರವಾಗಿ ಸಂಪರ್ಕಿಸುವ ‘ಯುವ ಉದ್ಯೋಗ ಸೇತು’ ಎಂಬ ಅತ್ಯಾಧುನಿಕ ಉದ್ಯೋಗ ವಿನಿಮಯ ಕೇಂದ್ರವನ್ನು ಮುಂದಿನ 60 ದಿನಗಳ ಒಳಗಾಗಿ ಪ್ರಾರಂಭಿಸಲಾಗುವುದು.

3. ಭಾರತ ಜೋಡೋ ಯುವ ಸಂಘ ಕ್ಲಬ್ ಸ್ಥಾಪನೆ ಹಾಗೂ ಭಾರಿ ಅನುದಾನ:
ಯುವಜನರಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು, ಭ್ರಾತೃತ್ವ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಮತ್ತು ಸಾಮುದಾಯಿಕ ಪ್ರಜ್ಞೆಯನ್ನು ಉತ್ತೇಜಿಸಲು ಪ್ರತಿ ಗ್ರಾಮ ಪಂಚಾಯತ್ ಹಾಗೂ ನಗರ ವಾರ್ಡ್ಗಳ ವ್ಯಾಪ್ತಿಯಲ್ಲಿ ತಲಾ ಒಂದರಂತೆ ರಾಜ್ಯಾದ್ಯಂತ ಒಟ್ಟು 10 ಸಾವಿರ ‘ಭಾರತ ಜೋಡೋ ಯುವ ಸಂಘ ಕ್ಲಬ್’ಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರತಿ ಕ್ಲಬ್ಗೆ ತಲಾ ರೂ. 10 ಲಕ್ಷದಂತೆ ಒಟ್ಟು ರೂ. 1,000 ಕೋಟಿ ಭಾರಿ ಅನುದಾನವನ್ನು ಒದಗಿಸಲಾಗುವುದು.

4. ಒಸಿ-ಸಿಸಿ ಸಮಸ್ಯೆಗೆ ಪರಿಹಾರ (ವಿದ್ಯುತ್ ಸಂಪರ್ಕ ಸಡಿಲಿಕೆ):
2400 ಚದರ ಅಡಿವರೆಗಿನ (+10 ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ಜಿ+2 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಟ್ ಪಾರ್ಕಿಂಗ್ +3 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ 31 ಮೇ 2026ರ ಒಳಗಾಗಿ ಅರ್ಜಿ ಸಲ್ಲಿಸಿದವರಿಗೆ ವಿದ್ಯುತ್ ಸಂಪರ್ಕ ಪಡೆಯಲು ಒಂದು ಬಾರಿಯ ‘ಸ್ವಾಧೀನಾನ್ಭವ ಪ್ರಮಾಣ ಪತ್ರ’ (OC/CC) ವಿನಾಯಿತಿ ಸೌಲಭ್ಯ ಒದಗಿಸುವ ಮೂಲಕ ಸಾರ್ವಜನಿಕರ ದೀರ್ಘಕಾಲದ ಸಮಸ್ಯೆಗೆ ದೊಡ್ಡ ಪರಿಹಾರ ನೀಡಲಾಗಿದೆ.

5. ರಾಜ್ಯಾದ್ಯಂತ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ:
ರಾಜ್ಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾನೂನು ಮತ್ತು ನಿಯಮಾವಳಿಗಳನ್ನು ಸರಳೀಕರಣಗೊಳಿಸುವ ಮೂಲಕ ಅರ್ಹ ಆಸ್ತಿಗಳನ್ನು ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಮುಕ್ತ ಅವಕಾಶ ಕಲ್ಪಿಸಲಾಗುವುದು. ಈ ಮೂಲಕ ಲಕ್ಷಾಂತರ ನಾಗರಿಕರಿಗೆ ಅಧಿಕೃತ ಆಸ್ತಿ ಪತ್ರ ಸಿಗಲಿದ್ದು, ಭೂಮಿಯ ನೈಜ ಮೌಲ್ಯದ ಅರಿವಾಗಲಿದೆ ಮತ್ತು ಆಸ್ತಿ ಮಾಲೀಕರಿಗೆ ಕಾನೂನಾತ್ಮಕ ಭದ್ರತೆ ದೊರೆಯಲಿದೆ.

6. ಗ್ರೇಟರ್ ಬೆಂಗಳೂರು ರಸ್ತೆ ಅಭಿವೃದ್ಧಿಗೆ 3 ಸಾವಿರ ಕೋಟಿ ಅನುದಾನ:
ಗ್ರೇಟರ್ ಬೆಂಗಳೂರು (ಜಿಬಿಎ) ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವ್ಯಾಪ್ತಿಯಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪ್ರಸ್ತುತ ಚಾಲ್ತಿಯಲ್ಲಿರುವ ಕಾರ್ಯಕ್ರಮಗಳ ಜೊತೆಯಲ್ಲಿ ಹೆಚ್ಚುವರಿಯಾಗಿ ಬರೋಬ್ಬರಿ ರೂ. 3,000 ಕೋಟಿ ವೆಚ್ಚದಲ್ಲಿ ವಾರ್ಡ್ ರಸ್ತೆಗಳು ಸೇರಿದಂತೆ ಸಮಗ್ರ ರಸ್ತೆ ಮೂಲಸೌಲಭ್ಯ ಮತ್ತು ಡಾಂಬರೀಕರಣ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು.

BIG NEWS: CM DKshi Good News for Property Owners: Opportunity to convert from B-Khata to A-Khata across the state!
Share. Facebook Twitter LinkedIn WhatsApp Email

Related Posts

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

2 Mins Read

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

4 Mins Read

ಮನೆ ಕಟ್ಟುವವರಿಗೆ ಸಿಎಂ ಡಿಕೆಶಿ ಬಂಪರ್ ಗಿಫ್ಟ್ : `OC- CC’ ಸಮಸ್ಯೆಗೆ ಶಾಶ್ವತ ಪರಿಹಾರ, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಗ್ರೀನ್ ಸಿಗ್ನಲ್.!

2 Mins Read
Recent News

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

BIG NEWS : ಆಸ್ತಿ ಮಾಲೀಕರಿಗೆ ಸಿಎಂ ಡಿಕೆಶಿ ಗುಡ್ ನ್ಯೂಸ್ : ರಾಜ್ಯಾದ್ಯಂತ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ.!

​ಯುದ್ಧ ವಿರಾಮಕ್ಕೆ ಒಪ್ಪಿದ ಇಸ್ರೇಲ್ ಮತ್ತು ಲೆಬನಾನ್: ಗಡಿಯಲ್ಲಿ ಶಾಂತಿಯ ನಿರೀಕ್ಷೆ!

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

State News
KARNATAKA

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಾರ್ವಜನಿಕರಿಗೆ ಹಾಗೂ ರಾಜ್ಯದ ಜನತೆಗೆ ಭರ್ಜರಿ ಕೊಡುಗೆಯನ್ನು ನೀಡಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿಯಾದ…

BIG NEWS : ಆಸ್ತಿ ಮಾಲೀಕರಿಗೆ ಸಿಎಂ ಡಿಕೆಶಿ ಗುಡ್ ನ್ಯೂಸ್ : ರಾಜ್ಯಾದ್ಯಂತ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಅವಕಾಶ.!

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

ಮನೆ ಕಟ್ಟುವವರಿಗೆ ಸಿಎಂ ಡಿಕೆಶಿ ಬಂಪರ್ ಗಿಫ್ಟ್ : `OC- CC’ ಸಮಸ್ಯೆಗೆ ಶಾಶ್ವತ ಪರಿಹಾರ, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಗ್ರೀನ್ ಸಿಗ್ನಲ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.