ಬೆಂಗಳೂರು : ರಾಜ್ಯದ ಸಾರಿಗೆ ಸಂಸ್ಥೆ ನೌಕರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಸಿಬ್ಬಂದಿಗೆ 2024ರ ಜ.1 ರಿಂದ ಅನ್ವಯವಾಗುವಂತೆ ವೇತನ ಹೆಚ್ಚಳ ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಮಂಗಳವಾರ KSRTC ನೌಕರ ಸಂಘಟನೆಗಳ ಪ್ರಮುಖರೊಂದಿಗೆ ಸಭೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾರಿಗೆ ನೌಕರರಿಗೆ ಸಮಾನ ವೇತನ ಜಾರಿ ಸೇರಿ ಎಲ್ಲಬೇಡಿಕೆಗಳ ಕುರಿತು ಪರಿಶೀಲಿಸಲಾಗುವುದು. ಬೇಡಿಕೆಗಳ ಈಡೇರಿಕೆಗಾಗಿ ಮತ್ತೊಮ್ಮೆ ಕಾರ್ಮಿಕಸಂಘಟನೆಗಳೊಂ ದಿಗೆ ಸಭೆ ನಡೆಸುತ್ತೇನೆ. ಆ ಸಂದರ್ಭದಲ್ಲಿ ಕೂಲಂಕಷವಾಗಿ ಚರ್ಚೆ ನಡೆಸಿ ಬೇಡಿಕೆಅನುಷ್ಠಾನಕ್ಕೆಮುಂದಾಗಲಾಗು ವುದು ಎಂದರು.
ಸರ್ಕಾರದ ಇತಿಮಿತಿಯಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಿಸಲಾಗುವುದು. ಸಾರಿಗೆ ನೌಕರರಿಗೆ ಈಗಾಗಲೇ ನಗದು ರಹಿತ ಚಿಕಿತ್ಸಾ ಸೌಲಭ್ಯ ಒದಗಿಸಲಾಗಿದೆ. ಅದರ ಜತೆಗೆ 2 ಸಾವಿರ ಹೊಸ ಬಸ್‌ಗಳ ಖರೀದಿಗೂ ಒಪ್ಪಿಗೆ ನೀಡಲಾಗಿದೆ. ಅದರೊಂದಿಗೆ ನಿಗಮ ಗಳಲ್ಲಿ ಚಾಲಕ ಮತ್ತು ನಿರ್ವಾಹಕರ ನೇಮಕಾತಿ ಮಾದರಿಯಲ್ಲಿಯೇ ಮೆಕ್ಯಾನಿಕ್‌ಗಳ ನೇಮಕಾತಿಗೂ ಅನು ಮತಿಸಲಾಗುವುದು ಎಂದು ಭರವಸೆ ನೀಡಿದರು.