ಬೆಂಗಳೂರು : ಕಾಂಗ್ರೆಸ್ ನಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಬಿ.ಕೆ. ಹರಿಪ್ರಸಾದ್ ಭೇಟಿಯಾಗಿ ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.
ಸಿಎಂ ಕಚೇರಿಯಲ್ಲಿ ಸಿಬ್ಬಂದಿಗಳನ್ನು ಹೊರಕಳಿಸಿ ಬಿ.ಕೆ. ಹರಿಪ್ರಸಾದ್ ರೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾತುಕತೆ ನಡೆಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯರ ಕಟು ಟೀಕಾಕಾರರಾಗಿದ್ದ ಬಿ.ಕೆ. ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಮೈಸೂರಿನಲ್ಲಿ ನಡೆಯಲಿರುವ ಜನಾಂದೋಲನಾ ಸಭೆಗೆ ಆಹ್ವಾನಿಸುವ ಸಂಬಂಧ ಬಿ.ಕೆ.ಹರಿಪ್ರಸಾದ್ ಗೆ ಕರೆ ಮಾಡಿ ಸಚಿವ ಹೆಚ್.ಸಿ. ಮಹದೇವಪ್ಪ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗುವಂತೆ ಕೇಳಿದ್ದರು ಎನ್ನಲಾಗಿದೆ. ಹೀಗಾಗಿ ಹರಿಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.