Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನರೇ ಇತ್ತ ಗಮನಿಸಿ : 2002 ರ ಮತದಾರರ ಪಟ್ಟಿಗೆ `ಮ್ಯಾಪಿಂಗ್’ ಕಡ್ಡಾಯ.!

08/02/2026 7:31 AM

ಜಪಾನ್ ಸಾರ್ವತ್ರಿಕ ಚುನಾವಣೆ ಆರಂಭ: ಪ್ರಧಾನಿ ಸನಾ ಟಕೈಚಿ ಭವಿಷ್ಯ ನಿರ್ಧರಿಸಲಿದ್ದಾರೆ ಮತದಾರರು!

08/02/2026 7:30 AM

‘ದೇಶದ ಹಿತಾಸಕ್ತಿಯೇ ನಮಗೆ ಮುಖ್ಯ’: ರಷ್ಯಾ ತೈಲ ಖರೀದಿ ಬಗ್ಗೆ ಭಾರತದ ಖಡಕ್ ನಿಲುವು !

08/02/2026 7:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೋ ಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲು: ಸಿಎಂ ಸಿದ್ದರಾಮಯ್ಯ ಘೋಷಣೆ
KARNATAKA

BIG NEWS : ಕೋ ಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲು: ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow5718/11/2024 7:00 AM

ಬಾಗಲಕೋಟೆ : ಕೋಆಪರೇಟೀವ್ ಮ್ಯಾನೇಜ್‌ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಆಯೋಜಿಸಿದ್ದ 71ನೇ ಅಖಿಲ‌ ಭಾರತ ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಯಾವತ್ತೂ ಸಹಕಾರಿ ಚಳವಳಿ ಮತ್ತು ಸಹಕಾರಿ ತತ್ವದ ಪರವಾಗಿ ಇರುವವನು. ಈ ಕಾರಣಕ್ಕೆ ಸಹಕಾರ ಇಲಾಖೆಯ ನೇಮಕಾತಿಗಳಲ್ಲಿ ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವಿ, ಡಿಪ್ಲೊಮೋ ಪಡೆದವರಿಗೆ ಮೀಸಲಾತಿ ನೀಡುವ ಪರವಾಗಿದ್ದೀನಿ. ರಾಜ್ಯದಲ್ಲಿ ಸಹಕಾರಿ ಚಳವಳಿ 1904 ರಲ್ಲೇ ಅಂದರೆ ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾಗಿತ್ತು. 1905 ರಲ್ಲಿ ಸಹಕಾರಿ ನಿಯಮಗಳು ಜಾರಿಗೆ ಬಂದವು. ಸ್ವಾತಂತ್ರ್ಯ ನಂತರ ನೆಹರೂ ಅವರು ದೇಶದ ಪ್ರಧಾನಿಯಾಗಿ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಬೆಂಬಲ ಮತ್ತು ಪ್ರೋತ್ಸಾಹ ಕೊಟ್ಟಿದ್ದರಿಂದ ಸಹಕಾರಿ ಚಳವಳಿ ದೇಶವ್ಯಾಪಿ ವ್ಯಾಪಿಸಲು ನೆರವಾಯಿತು ಎಂದರು.

ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಹೆಚ್ಚೆಚ್ಚು ಸಹಕಾರಿ ಚಳವಳಿಯಲ್ಲಿ ತೊಡಗಿಸಿಕೊಳ್ಳಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಿಗೆ ಈ ಸಮುದಾಯದ ಯುವಕ / ಯುವತಿಯರನ್ನು ಉಚಿತವಾಗಿ ಸದಸ್ಯರನ್ನಾಗಿ ಮಾಡಿದ್ದೆ. ಈಗಲೂ ಇದು ಮುಂದುವರೆಯಬೇಕು. ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಮತ್ತು ಇವರಿಂದ ಹೆಚ್ಚೆಚ್ಚು ಹಾಲನ್ನು ಖರೀದಿಸಬೇಕು. ಸಹಕಾರ ಸಂಘಗಳ ಹಾಲಿಗೆ ಮಾರುಕಟ್ಟೆ ವಿಸ್ತರಿಸಬೇಕು. ಚನ್ನಪಟ್ಟಣ ತಾಲ್ಲೂಕೊಂದರಲ್ಲೇ 3 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಲೀ ಹಾಲಿಗೆ 31 ರೂ ಅಂದರೆ 3 ಲಕ್ಷ ಲೀಟರ್ ಗೆ ಕೋಟಿ ರೂಪಾಯಿ ಆಗ್ತದೆ. ಇದು ಆರ್ಥಿಕತೆಗೂ ಹೆಚ್ಚಿನ ಕೊಡುಗೆ ನೀಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ಹಾಲು ಉತ್ಪಾದಕರಿಗೆ ಅನುಕೂಲ ಮಾಡುವ ಉದ್ದೇಶದಿಂದಲೇ ನಮ್ಮ ಸರ್ಕಾರ ಕ್ಷೀರಭಾಗ್ಯ ಆರಂಭಿಸಿತು. ಲೀಟರ್ ಹಾಲಿಗೆ 5 ರೂ ಪ್ರೋತ್ಸಾಹಧನ ನೀಡುವುದನ್ನು ನಮ್ಮ ಅವಧಿಯಲ್ಲಿ ಆರಂಭಿಸಲಾಯಿತು. ರೈತರ ಕೈಯಲ್ಲೇ ಹಾಲು ಉತ್ಪಾದಕ ಸಂಘಗಳು ಇರಬೇಕು ಎನ್ನುವ ಉದ್ದೇಶದಿಂದ ಡೈರಿಗಳನ್ನು ರೈತರಿಗೇ ನೀಡುವ ತೀರ್ಮಾನ ಮಾಡಿದೆವು. ಈ ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಆರ್ಥಿಕತೆ ಗಟ್ಟಿಯಾಯಿತು. ಇದೇ ಮಹಾತ್ಮಗಾಂಧಿಯವರ ಗ್ರಾಮ ಸ್ವರಾಜ್ಯದ ಆಶಯವೂ ಆಗಿದೆ.

ಪಂಚಾಯ್ತಿ, ಸೊಸೈಟಿ, ಶಾಲೆ ಈ ಮೂರೂ ಪ್ರತೀ ಗ್ರಾಮಗಳಲ್ಲಿ ಇರಲೇಬೇಕು. ಆಗಲೇ ಗ್ರಾಮಗಳ ಪ್ರಗತಿ ಸಾಧ್ಯ ಎನ್ನುವುದು ಮಹಾತ್ಮಗಾಂಧಿಯವರ ಆಶಯವಾಗಿತ್ತು‌. ರಾಜೀವ್ ಗಾಂಧಿಯವರು ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣ ಜಾರಿ ಮಾಡಿ ಮಹಿಳೆಯರು, ಹಿಂದುಳಿದವರು, ದಲಿತರ ಕೈಗೆ ಅಧಿಕಾರ ಸಿಗುವಂತೆ ಮಾಡಿದರು. ಸಮಾನತೆಯ ಸಮಾಜ ನಿರ್ಮಾಣ ಆಗಬೇಕು ಎನ್ನುವ ಆಶಯದಿಂದ ಸಮಾಜದ ಎಲ್ಲಾ ವರ್ಗದವರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ ಜಾರಿ ಮಾಡಿದೆ.

ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಸೇರಿದ್ದು. ಆದರೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರದಲ್ಲಿ ಸಹಕಾರ ಇಲಾಖೆ ಆರಂಭಿಸಿದರು. ಇದಕ್ಕೆ ಅಮಿತ್ ಶಾ ಅವರೇ ಸಚಿವರು‌. ಇದು ಕೇಂದ್ರದ ವ್ಯಾಪ್ತಿಗೆ ಬರುವ ವಿಷಯ ಅಲ್ಲ. ಇದರಿಂದಾಗಿ ನಮಗೆ ನಬಾರ್ಡ್ ನಿಂದ ಬರುವ ರೈತರ ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ 58% ನಬಾರ್ಡ್ ನೆರವು ಕಡಿತಗೊಂಡಿದೆ. ಇದು ನಮ್ಮ ರೈತರಿಗೆ ಆದ ಬಹಳ ದೊಡ್ಡ ಅನ್ಯಾಯ. ರೈತರ ಬಗ್ಗೆ ಬಿಜೆಪಿ ಭಾಷಣ ಮಾತ್ರ ಚೆನ್ನಾಗಿ ಮಾಡುತ್ತದೆ. ಬರೀ ಭಾಷಣದಿಂದ ರೈತರ ಬದುಕನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಬಾರ್ಡ್ ನಿಂದ ನಮಗೆ ಆದ ಅನ್ಯಾಯವನ್ನು ಪ್ರತಿಯೊಬ್ಬರು ಪ್ರತಿಭಟಿಸಬೇಕು. 2013 ರಲ್ಲಿ ₹8,165 ಕೋಟಿ ರೈತರ ಸಾಲವನ್ನು ನಾನು ಮೊದಲು ಬಾರಿ ಮುಖ್ಯಮಂತ್ರಿಯಾಗಿ ಮನ್ನಾ ಮಾಡಿದ್ದೆ. ಇದರಿಂದ ಸಹಸ್ರಾರು ರೈತರ ಬದುಕಿಗೆ ನೆರವಾಯಿತು. ಸಹಕಾರ ಮಹಾಮಂಡಳದ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದ ನೆರವು ನೀಡಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದರು.‌

BIG NEWS : ಕೋ ಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲು: ಸಿಎಂ ಸಿದ್ದರಾಮಯ್ಯ ಘೋಷಣೆ BIG NEWS: Cm Siddaramaiah announces reservation in jobs for co-operative management graduates
Share. Facebook Twitter LinkedIn WhatsApp Email

Related Posts

ರಾಜ್ಯದ ಜನರೇ ಇತ್ತ ಗಮನಿಸಿ : 2002 ರ ಮತದಾರರ ಪಟ್ಟಿಗೆ `ಮ್ಯಾಪಿಂಗ್’ ಕಡ್ಡಾಯ.!

08/02/2026 7:31 AM1 Min Read

ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ ಬಹಿರಂಗ : 8 ನೇ ಇಲಾಖೆಯ ಬಗ್ಗೆ ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ.!

08/02/2026 7:09 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಜಮೀನು ದಾರಿ’ ಕಲ್ಪಿಸಿಕೊಡಲು ತಹಶೀಲ್ದಾರ್ ಗಳಿಗೆ ವಿಶೇಷ ಅಧಿಕಾರ.!

08/02/2026 6:56 AM4 Mins Read
Recent News

ರಾಜ್ಯದ ಜನರೇ ಇತ್ತ ಗಮನಿಸಿ : 2002 ರ ಮತದಾರರ ಪಟ್ಟಿಗೆ `ಮ್ಯಾಪಿಂಗ್’ ಕಡ್ಡಾಯ.!

08/02/2026 7:31 AM

ಜಪಾನ್ ಸಾರ್ವತ್ರಿಕ ಚುನಾವಣೆ ಆರಂಭ: ಪ್ರಧಾನಿ ಸನಾ ಟಕೈಚಿ ಭವಿಷ್ಯ ನಿರ್ಧರಿಸಲಿದ್ದಾರೆ ಮತದಾರರು!

08/02/2026 7:30 AM

‘ದೇಶದ ಹಿತಾಸಕ್ತಿಯೇ ನಮಗೆ ಮುಖ್ಯ’: ರಷ್ಯಾ ತೈಲ ಖರೀದಿ ಬಗ್ಗೆ ಭಾರತದ ಖಡಕ್ ನಿಲುವು !

08/02/2026 7:22 AM

ನೀವು ರಕ್ತ ನೀಡಿದ ಮೇಲೆ ದೇಹದಲ್ಲಿ ಏನಾಗುತ್ತದೆ ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ !

08/02/2026 7:15 AM
State News
KARNATAKA

ರಾಜ್ಯದ ಜನರೇ ಇತ್ತ ಗಮನಿಸಿ : 2002 ರ ಮತದಾರರ ಪಟ್ಟಿಗೆ `ಮ್ಯಾಪಿಂಗ್’ ಕಡ್ಡಾಯ.!

By kannadanewsnow5708/02/2026 7:31 AM KARNATAKA 1 Min Read

ಚುನಾವಣಾ ಆಯೋಗದ ನಿರ್ದೇಶನದಂತೆ ಎಸ್‍ಐಆರ್ ಪೂರ್ವ ಚಟುವಟಿಕೆಯ ಅಂಗವಾಗಿ 2002ರ ಮತದಾರರನ್ನು ಈಗಿನ 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಕಾರ್ಯವು…

ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ ಬಹಿರಂಗ : 8 ನೇ ಇಲಾಖೆಯ ಬಗ್ಗೆ ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ.!

08/02/2026 7:09 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಜಮೀನು ದಾರಿ’ ಕಲ್ಪಿಸಿಕೊಡಲು ತಹಶೀಲ್ದಾರ್ ಗಳಿಗೆ ವಿಶೇಷ ಅಧಿಕಾರ.!

08/02/2026 6:56 AM

Property Rules : `ಆಸ್ತಿ ರಿಜಿಸ್ಟರ್​’ಗೆ ಇನ್ಮುಂದೆ ಈ 5 ದಾಖಲೆಗಳು ಕಡ್ಡಾಯ.!

08/02/2026 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.