ಬೆಂಗಳೂರು : ಕಳೆದ ವರ್ಷ ಡಿಸೆಂಬರ್ ನಲ್ಲಿ ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನ ಅಂತರ್ಜಾತಿ ವಿವಾಹ ಆಗಿದ್ದಕ್ಕೆ, ಯುವತಿಯ ತಂದೆ ಮನೆಗೆ ನುಗ್ಗಿ ಗರ್ಭಿಣಿ ಅಂತಾನೂ ನೋಡದೆ ಕೊಡಲಿಯಿಂದ ಕೊಚ್ಚಿ ಮಗಳನ್ನೇ ಹತ್ಯೆಗೈದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದೀಗ ಈ ಒಂದು ಘಟನೆಯನ್ನು ಖಂಡಿಸಿದ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ರಾಜ್ಯದಲ್ಲಿ ‘ಮರ್ಯಾದಾ ಹತ್ಯೆ’ ತಡೆಗೆ ಶೀಘ್ರ ವಿಶೇಷ ಕಾನೂನು ರಚನೆ ಜಾರಿಗೊಳಿಸಲಾಗುತ್ತೆ ಎಂದು ಘೋಷಣೆ ಮಾಡಿದ್ದಾರೆ.
ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ.
ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ. ಹೆಣ್ಣುಮಗಳೊಬ್ಬಳ ನಿಲುವಿಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು ಅಥವಾ ಮದುವೆ ನಿರಾಕರಿಸುವುದು, ಜಾತಿಯಾಧಾರಿತ ಹಿಂಸೆ -ಹಲ್ಲೆ, ಮರ್ಯಾದಾಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು.
ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಕಾನೂನು ರಚನೆ ಮಾಡಲಾಗುವುದು. ಈ ಬಗ್ಗೆ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ.
ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ…
— Siddaramaiah (@siddaramaiah) January 4, 2026








