ಬೆಂಗಳೂರು : ನಂದಿನಿ ಹಾಲಿನ ದರ ಏರಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇದೀಗ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಭೆ ಆರಂಭವಾಗಿದೆ. ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಸಹಕಾರಿ ಸಚಿವ ಕೆ.ಎನ್ ರಾಜಣ್ಣ, ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಬಾಲಚಂದ್ರ ಜಾರಕಿಹೊಳಿ ಹಾಗು ಜಿಲ್ಲಾ ಒಕ್ಕೂಟದ ಅಧ್ಯಕ್ಷರು, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಪ್ರತಿ ಲೀಟರ್ ಹಾಲಿನ ದರ ರೂ.5 ಹೆಚ್ಚಳಕ್ಕೆ ಕೆಎಂಎಫ್ ಪ್ರಸ್ತಾಪ ಇಟ್ಟಿದೆ. ಹಾಲಿನ ದರ ಏರಿಕೆ ಹಾಗೂ ಪಶುಗಳಿಗೆ ಆಹಾರ ಸೇರಿ ಹಲವು ವಿಚಾರಗಳು ಈ ಒಂದು ಸಭೆಯಲ್ಲಿ ಚರ್ಚೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ರಾಜ್ಯದ ಜನತೆಗೆ ಕೆಎಸ್ಆರ್ಟಿಸಿ ಬಸ್ ಪ್ರಯಾಣದ ಟಿಕೆಟ್ ದರ, ಮೆಟ್ರೋ ಟಿಕೆಟ್ ದರ ಏರಿಕೆ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆ ಮಾಡಿದ್ದು ಇದರ ಬೆನ್ನಲ್ಲೆ ಹಾಲಿನ ದರ ಏರಿಕೆ ಮಾಡಿದರೆ, ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ.