ಬೆಂಗಳೂರು : ರಾಯಚೂರಿನ ತಿಂಥಣಿಯ ಕನಕ ಗುರು ಪೀಠದ ಶ್ರೀ ಸಿದ್ದರಮಾನಂದ ಶ್ರೀಗಳು ಇಂದು ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶ್ರೀಗಳ ನಿಧನಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ.
ಶ್ರೀಗಳ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ, ಶ್ರೀ ಮಠದ ಭಕ್ತಾದಿಗಳು ಹಾಗೂ ಅಪಾರ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ಸೂಚಿಸಿದ್ದಾರೆ.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟುಮಾಡಿದೆ.
ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ ಅಪಾರ ಕಾಳಜಿ, ಶ್ರದ್ಧೆ ಹೊಂದಿದ್ದ ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ.ಶ್ರೀಗಳ… pic.twitter.com/5lf5FAFpQu
— Siddaramaiah (@siddaramaiah) January 15, 2026








