ಬೆಂಗಳೂರು : ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದರು. ಹಾಗಾಗಿ ಇಂದು ಹೈ ಕೋರ್ಟ್ ನಲ್ಲಿ ನ್ಯಾ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ.
ಕಳೆದ ಸಪ್ಟೆಂಬರ್ 27ರಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಅವರು ಹೈಕೋರ್ಟಿಗೆ ಸಿಬಿಐ ತನಿಖೆಗೆ ಆದೇಶ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು.ಹಾಗಾಗಿ ಇಂದು ಲೋಕಾಯುಕ್ತ ಪೊಲೀಸ್, ಸಿಬಿಐ ಪ್ರತಿವಾದಿಗಳು, ಸಿದ್ದರಾಮಯ್ಯ ಪತ್ನಿ ಪಾರ್ವತಿ ಕೂಡ ಪ್ರತಿವಾದಿಗಳಾಗಿದ್ದಾರೆ.
ಒಂದು ವೇಳೆ ಸಿಬಿಐ ತನಿಖೆಗೆ ಆದೇಶಿಸಿದರೆ ಲೋಕಾಯುಕ್ತ ಪೊಲೀಸರ ತನಿಖೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಲೋಕಾಯುಕ್ತ ಪೊಲೀಸರ ವಾದವನ್ನು ಇಂದು ಹೈಕೋರ್ಟ್ ಪಾಲಿಸಲಿದೆ ಹಾಗಾಗಿ ಕೆಲವೇ ಕ್ಷಣಗಳಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಯಲಿದೆ.