ವಿಜಯನಗರ : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಕುರಿತಂತೆ ಇತ್ತೀಚಿಗೆ ಹಲವು ಕೈ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಇನ್ನು ಇದೇ ವಿಚಾರವಾಗಿ ಸಚಿವ ಜಮೀರ್ ಅಹಮದ್ ಖಾನ್ ಪ್ರತಿಕ್ರಿಯೆ ನೀಡಿದು ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ ಅವರನ್ನು ಮುಟ್ಟೋಕಾಗುತ್ತಾ ಅಕಸ್ಮಾತ ಒಂದು ವೇಳೆ ಮುಟ್ಟಿದರು ಅವರು ಸುಟ್ಟು ಬಸವ ಮಾಡುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು.
ವಿಜಯನಗರ ಜಿಲ್ಲೆಯ ಹಂಪಿ ಎಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,ಸಿದ್ದರಾಮಯ್ಯ ಬೆಂಕಿ ಇದ್ದಂತೆ ಯಾರು ಮುಟ್ಟೋಕಾಗಲ್ಲ ಒಂದು ವೇಳೆ ಮುಟ್ಟಿದರೆ ಭಸ್ಮವಾಗುತ್ತಾರೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಮುಟ್ಟಲು ಸಾಧ್ಯ ಏನ್ರೀ? ಒಂದು ವೇಳೆ ಮುಟ್ಟಿದರೆ ಸುಟ್ಟು ಭಸ್ಮವಾಗುತ್ತಾರೆ.ಸಿಎಂ ಸ್ಥಾನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಸಚಿವ ಜಮೀರ್ ಅಹ್ಮದ್ ತಿಳಿಸಿದರು
ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ಇದ್ದಾರೆ. ಎಲ್ಲಾ ಸಮುದಾಯದವರಿಗೂ ಸಿಎಂ ಆಗಬೇಕೆಂಬ ಆಸೆ ಇರುತ್ತದೆ ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಿ ಎಂದು ಯಾರು ಹೇಳಿಲ್ಲ. ಸಿಎಂ ಸ್ಥಾನ ಖಾಲಿ ಇದ್ದರೆ ತಾನೆ ಅದರ ಬಗ್ಗೆ ಚರ್ಚೆ ಮಾಡೋಕಾಗೋದು? ಹಾಗಾಗಿ ಸಿಎಂ ಸಿದ್ದರಾಮಯ್ಯ ಕುರ್ಚಿ ಮುಟ್ಟಲು ಸಾಧ್ಯವಿಲ್ಲ ಎಂದು ತಿಳಿಸಿದರು.