ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಲಸಿಕಾ ದಿನ(ಪಲ್ಸ್ ಪೋಲಿಯೋ) 2025ಗೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ಕೊಟ್ಟರು.
ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ ಇಂದಿನಿಂದ ಡಿಸೆಂಬರ್ 24ರ ಒಳಗಾಗಿ ತಪ್ಪದೇ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ ಭಾರತ ಅಭಿಯಾನದ ಜೊತೆಯಾಗಿ ಇಂದು ನೀವು ಮಗುವಿಗೆ ಹಾಕಿಸುವ ಎರಡು ಹನಿ ಲಸಿಕೆ, ಅದರ ಭವಿಷ್ಯವನ್ನು ಶಾಶ್ವತ ಅಂಗವೈಕಲ್ಯದಿಂದ ರಕ್ಷಿಸಲಿದೆ ಎಂದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಭಾರತದಾದ್ಯಂತ ಪೋಲಿಯೋ ಲಸಿಕೆ ಹಾಕುವುದು ಮತ್ತು ಅದರ ಕುರಿತು ಅಭಿಯಾನ ನಡೆಯುತ್ತಿದೆ. ಸತತ ಜಾಗೃತಿಯಿಂದಾಗಿ ಪೋಲಿಯೋ ರೋಗವನ್ನು ನಿಯಂತ್ರಿಸಲಾಗಿದೆ ಎಂದರು.
ಗೃಹಕಚೇರಿ ಕೃಷ್ಣಾದಲ್ಲಿ "ರಾಷ್ಟ್ರೀಯ ಲಸಿಕಾ ದಿನ"ವನ್ನು ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿದೆ.
ಪ್ರತಿಯೊಬ್ಬರೂ ತಮ್ಮ 5 ವರ್ಷದೊಳಗಿನ ಮಕ್ಕಳಿದ ತಪ್ಪದೇ ಪೋಲಿಯೊ ಲಸಿಕೆ ಹಾಕಿಸುವ ಮೂಲಕ "ಪೋಲಿಯೊ ಮುಕ್ತ ಭಾರತ"ದ ನಮ್ಮ ಅಭಿಯಾನಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡುತ್ತೇನೆ.
ಆರೋಗ್ಯ ಸಚಿವರಾದ ದಿನೇಶ್… pic.twitter.com/uClMoqOnyB
— Siddaramaiah (@siddaramaiah) December 21, 2025








