ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಜಾರಿ ನಿರ್ದೇಶನಾಲಯದ ಟೆನ್ಶನ್ ಶುರುವಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕುಮಾರ್ ನಾಯಕ್ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಹಾಗಾಗಿ ಸಹಜವಾಗಿ ಸಿಎಂ ಸಿದರಾಮಯ್ಯ ಅವರಿಗೆ ಇದೀಗ ಇಡಿ ಅಧಿಕಾರಿಗಳ ಟೆನ್ಶನ್ ಹೆಚ್ಚಾಗಿದೆ.
ಹಾಗಾಗಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಮಲ್ಲಿಕಾರ್ಜುನ ಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಶೀಘ್ರದಲ್ಲಿ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಇದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ತರಲಿ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆಯನ್ನು ಕೂಡ ಎದುರಿಸಿದ್ದಾರೆ ಹಾಗಾಗಿ ಸಹಜವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿ ಅಧಿಕಾರಿಗಳ ಭಯ ಶುರುವಾಗಿದೆ ಎನ್ನಲಾಗುತ್ತಿದೆ.