ಮೈಸೂರು : ವಾಲ್ಮೀಕಿ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಂ.1 ಆರೋಪಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಮಾತನಾಡಿ ಅವರು, ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಂ.1 ಆರೋಪಿಯಾಗಿದ್ದಾರೆ. ಆ ಕಾರಣಕ್ಕೆ ಇಬ್ಬರ ಹೆಸರನ್ನು ಕೈಬಿಟ್ಟು ಕೆಲಸ ಮಾಡುವಂತೆ ಸೂಚಿಸಿದ್ದಾರೆ.
ST ಸಮುದಾಯದ 187 ಕೋಟಿ ರೂ. ಲೂಟಿ ಹೊಡೆದ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಅವರನ್ನು ಹಗರಣದ ಚಾರ್ಜ್ಶಿಟ್ನಿಂದ ಕೈಬಿಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಭ್ರಷ್ಟ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಬಿಜೆಪಿ-ಜೆಡಿಎಸ್ ಹೋರಾಟ ಮುಂದುವರಿಯಲಿದೆ ಎಂದರು.