ಮೈಸೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಶಾಸಕ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಇತ್ತೀಚೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಿದ್ದಾರೆ.
ಇದೀಗ ಮೈಸೂರಿನಲ್ಲಿ ವಾಲ್ಮೀಕಿ ಜಯಂತಿ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಬಿ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಹೌದು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನಲ್ಲಿ ನಡೆದ ಸಮಾವೇಶ ಒಂದರಲ್ಲಿ ಮಾತನಾಡಿದ ಅವರು, ಶಾಸಕ ಚಿಕ್ಕಮಾದು ಅಭಿಮಾನಿಗಳು ಅವರಿಗೆ ಸಚಿವ ಸ್ಥಾನ ನೀಡಿ ಎಂದು ಮನವಿ ಮಾಡಿದರು.ಇದಕ್ಕೆ ಸಿಎಂ ಸಿದ್ದರಾಮಯ್ಯ ಸಚಿವ ಸ್ಥಾನ ಎಲ್ಲಿ ಖಾಲಿ ಇದೆ? ಹಾಗಾಗಿ ಚಿಕ್ಕ ಮಾದುಗೆ ಸಚಿವ ಸ್ಥಾನ ನೀಡಲು ಸದ್ಯಕ್ಕೆ ಆಗಲ್ಲ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗವಾಗಿದೆ. ಆ ಪ್ರಕರಣದ ತನಿಖೆ ನಡೆಯುತ್ತಿದೆ ಆದರೂ ನಿಗಮಕ್ಕೆ ಒಂದು ಪೈಸೆಯೂ ಕಡಿಮೆ ಮಾಡುವುದಿಲ್ಲ. ನನ್ನ ಬಳಿಯೇ ಈಗ ಆ ಖಾತೆ ಇದೆ.ಅದಕ್ಕೆ ಹಣ ಮೀಸಲು ಇಡುತ್ತೇನೆ. ಶಾಸಕ ನಾಗೇಂದ್ರ ಮೇಲೂ ಸುಳ್ಳು ಕೇಸ್ ಹಾಕಿಸಿದ್ದಾರೆ.ನಾಗೇಂದ್ರ ಗೆ ಈಗ ಬೆಲ್ ಸಿಕ್ಕಿದೆ, ಜೈಲಿನಿಂದ ಹೊರಗಡೆ ಬಂದಿದ್ದಾರೆ. ಚುನಾವಣೆ ಆದಮೇಲೆ ಒಂದು ತೀರ್ಮಾನ ಮಾಡಬೇಕಿದೆ ಎಂದು ನಾಗೆಂದ್ರಗೆ ಮತ್ತೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.