ಗದಗ : ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಬದಲಾವಣೆಗೆ ಮಾಡಬೇಕು ಎನ್ನುವ ಚಟುವಟಿಕೆಗಳ ಕಾಂಗ್ರೆಸ್ ಪಕ್ಷದಲ್ಲಿ ಚುರುಕಾಗಿ ನಡೆಯುತ್ತಿವೆ. ಹೀಗಾಗಿ ಸಿದ್ದರಾಮಯ್ಯ ಕೂಡ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ ಎಂದರು.
ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಚುರುಕಾಗಿ ನಡೆಯುತ್ತಿವೆ. ಹಿರಿಯ ಸಚಿವರ ದೆಹಲಿ ಭೇಟಿ, ರಾಜ್ಯದಲ್ಲಿನ ಕೆಲ ಸಚಿವರ ಪರಸ್ಪರ ಭೆಟಿಯ ವಿಚಾರಗಳನ್ನು ನೋಡಿದರೆ ಈ ಸಂಗತಿ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಆಡಳಿತ ಪಕ್ಷದವರೇ ಸಿಎಮ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.