ಬೆಂಗಳೂರು : ಮಾಜಿ ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಪ್ರಕರಣದಲ್ಲಿ ಸಿದ್ದರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ಬಿ.ನಾಗೇಂದ್ರ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಬಿ.ನಾಗೇಂದ್ರ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ಕೇವಲ ಒಂದೇ ಒಂದು ಸಾಲಿನಲ್ಲಿ ರಾಜೀನಾಮೆ ನೀಡಲಾಗಿದೆ. ಅವರು ನಾನು ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.