ತುಮಕೂರು : ರಾಜ್ಯ ಸರ್ಕಾರ ರಾಜ್ಯದ ಜನತೆಗೆ 5 ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಈ ಒಂದು ಗ್ಯಾರೆಂಟಿ ಯೋಜನೆಗಳ ಕುರಿತು ತುಮಕೂರು ರಿಜಿಸ್ಟರ್ ಒಬ್ಬರು ಟೀಕೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಗ್ಯಾರೆಂಟಿ ಯೋಜನೆಗಳ ಬಗ್ಗೆ ಟೀಕಿಸಿದ್ದರು. ಇದೀಗ ಸಬ್ ರಿಜಿಸ್ಟ್ರರ್ ರಾಧಮ್ಮ ಎನ್ನುವವರನ್ನ ದಿಢೀರ್ ವರ್ಗಾವಣೆ ಮಾಡಲಾಗಿದೆ.
ಹೌದು ಸಿಎಂ ಸಿದ್ದರಾಮಯ್ಯ ಮತ್ತು ಗ್ಯಾರಂಟಿ ಯೋಜನೆಗಳ ಬಗ್ಗೆ ತುಮಕೂರು ಜಿಲ್ಲೆಯ ಪಾವಗಡ ಸಬ್ ರಿಜಿಸ್ಟ್ರರ್ ರಾಧಮ್ಮ ಟೀಕೆ ಮಾಡಿದರು ಇದೀಗ ಅವರನ್ನು ತುಮಕೂರು ಜಿಲ್ಲಾ ನೊಂದಣಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ ಆದೇಶ ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಧಮ್ಮ ಟೀಕಿಸಿರುವ ವಿಡಿಯೋ ವೈರಲ್ ಆಗಿತ್ತು. ರೈತ ಸಂಘಟನೆಗಳು ಕೂಡ ಧರಣಿ ನಡೆಸಿದ್ದವು. ರಾಧಮ್ಮ ಲಂಚ ತೆಗೆದುಕೊಳ್ಳದೆ ಕೆಲಸ ಮಾಡಲ್ಲ ಎಂದು ರೈತರು ಆರೋಪಿಸಿದ್ದರು. ರೈತರ ವಿರೋಧಿಯಾಗಿರುವ ಸಬ್ ರಿಜಿಸ್ಟ್ರರ್ ಅಮಾನತಿಗೆ ಆಗ್ರಹಿಸಿದ್ದರು. ಇದೀಗ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.