ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವು ಜಿಲ್ಲೆಗಳಲ್ಲಿ ಜನರು ಊರನ್ನು ತೊರೆಯುತ್ತಿದ್ದಾರೆ. ಇನ್ನು ಕೆಲವು ಕಡೆಗಳಲ್ಲಿ ಆತ್ಮಹತ್ಯೆ ಕೂಡ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಈ ಒಂದು ವಿಚಾರವಾಗಿ ಇಂದು ಬೆಳಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಹೌದು, ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆ, ಬಾಕಿ ವಸೂಲಿ ಹೆಸರಿನಲ್ಲಿ ಶೋಷಣೆ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಕರ್ನಾಟಕ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ತರುವ ಕುರಿತು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಸಭೆ ನಡೆಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಹಲವರು ಪ್ರಾಣ ಕಳೆದುಕೊಂಡಿದ್ದಾರೆ.ಅಲ್ಲದೆ ನಿನ್ನೆ ಹಾವೇರಿಯಲ್ಲಿ ಮಹಿಳೆಯರು ವಿನೂತನ ಪ್ರತಿಭಟನೆ ನಡೆಸಿ ಅಂಚೆ ಪೋಸ್ಟ್ ಮೂಲಕ ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳುಹಿಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ವಿನೂತನ ಪ್ರತಿಭಟನೆ ಮಾಡಿದ್ದರು. ಇನ್ನು ಕೆಲವರು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಾಳ ಕಿರುಕುಳ ತಾಳಲಾರದೆ ಸಾಕಷ್ಟು ಜನರು ಆಯಾ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೇ ಜನರು ಮನೆ, ಊರು ಬಿಟ್ಟು ಹೋಗುತ್ತಿದ್ದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿದ್ದಾರೆ. ಸರಣಿ ಆತ್ಮಹತ್ಯೆ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಜನವರಿ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಿದ್ದು, ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ.