ಬೆಂಗಳೂರು : ಮುಂದಿನ ತಿಂಗಳು ಫೆಬ್ರವರಿ 28ರಿಂದ ಮೂರು ದಿನಗಳ ಕಾಲ ವಿಜಯನಗರ ಜಿಲ್ಲೆಯಲ್ಲಿ ಹಂಪಿ ಉತ್ಸವ ನಡೆಯಲಿದ್ದು, ಈ ಒಂದು ಉತ್ಸವಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದು, ಫೆಬ್ರವರಿ 18ರಂದು ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಹಂಪಿ ಉತ್ಸವ ನಡೆಸುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ಸೂಚನೆ ನೀಡಿದ್ದು, ಫೆಬ್ರುವರಿ 28ರಂದು ದಿನಾಂಕ ನಿಗದಿಯಾಗಿದ್ದು ಫೆಬ್ರವರಿ 28ರಿಂದ ಮಾರ್ಚ್ 1 ಮತ್ತು 2ನೇ ತಾರೀಖಿನವರೆಗೂ ಸುಮಾರು ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಹಂಪಿ ಉತ್ಸವ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಜಿಲ್ಲಾಧಿಕಾರಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಮಾರ್ಚ್ 2 ರಂದು ಹಂಪಿ ಉತ್ಸವದ ಸಮಾರೋಪ ಸಮಾರಂಭ ನಡೆಯಲಿದೆ.