ಬೆಂಗಳೂರು : ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ‘ಬೆಂಗಳೂರು ಹಬ್ಬʼ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಈ ಕುರಿತು ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಸಿದ್ದರಾಮಯ್ಯ ಅವರು ನಮ್ಮ ಜಾತ್ರೆ ಮೆರವಣಿಗೆಗೆ ಹಸಿರು ನಿಶಾನೆ ತೋರಿಸುವ ಮೂಲಕ ʼಬೆಂಗಳೂರು ಹಬ್ಬʼವನ್ನು ಉದ್ಘಾಟಿಸಲಿದ್ದಾರೆ. ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ನಡೆಯುವ ಈ ಐತಿಹಾಸಿಕ ಕ್ಷಣಕ್ಕೆ ತಮ್ಮೆಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ.ಬನ್ನಿ, ನಮ್ಮ ಹೆಮ್ಮೆಯ ಕರುನಾಡಿನ ಶ್ರೀಮಂತ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಭವ್ಯ ಪರಂಪರೆಗಳ ವೈಭವಪೂರ್ಣ ಉತ್ಸವದಲ್ಲಿ ಭಾಗವಹಿಸಿ, ಸೊಬಗನ್ನು ಕಣ್ತುಂಬಿಕೊಳ್ಳೋಣ ಎಂದು ಪ್ರಕಟಣೆ ಹೊರಡಿಸಿದೆ.
ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಮ್ಮ ಜಾತ್ರೆ ಮೆರವಣಿಗೆಗೆ ಹಸಿರು ನಿಶಾನೆ ತೋರಿಸುವ ಮೂಲಕ ʼಬೆಂಗಳೂರು ಹಬ್ಬʼವನ್ನು ಉದ್ಘಾಟಿಸಲಿದ್ದಾರೆ. ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ನಡೆಯುವ ಈ ಐತಿಹಾಸಿಕ ಕ್ಷಣಕ್ಕೆ ತಮ್ಮೆಲ್ಲರನ್ನೂ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ.
ಬನ್ನಿ, ನಮ್ಮ ಹೆಮ್ಮೆಯ ಕರುನಾಡಿನ ಶ್ರೀಮಂತ ಕಲೆ,… pic.twitter.com/D8oFwuQmA3
— DIPR Karnataka (@KarnatakaVarthe) November 29, 2024