Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳ್ಳಿ ಬೆಲೆಯಲ್ಲಿ ಒಂದೇ ಸಮನೆ 15,200 ರೂ. ಏರಿಕೆ! ಚಿನ್ನದ ದರದಲ್ಲೂ ಭಾರಿ ಜಿಗಿತ: ಕಾರಣ ಏನು ಗೊತ್ತಾ?

23/02/2026 2:17 PM

SHOCKING : ದಾವಣಗೆರೆಯಲ್ಲಿ ದಾರುಣ ಘಟನೆ: ಶಾಲೆಯಲ್ಲೇ `ಹೃದಯಾಘಾತ’ಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ!

23/02/2026 2:07 PM

ALERT : `ಲ್ಯಾಪ್ ಟಾಪ್’ ಮೂಲಕ ಮೊಬೈಲ್ ಚಾರ್ಜ್ ಮಾಡ್ತೀರಾ? ಈ ಕೂಡಲೇ ಆ ಅಭ್ಯಾಸ ಬಿಟ್ಟುಬಿಡಿ, ಇಲ್ಲದಿದ್ದರೆ ದೊಡ್ಡ ನಷ್ಟ ಗ್ಯಾರಂಟಿ !

23/02/2026 1:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಮಹತ್ವದ ‘ಗೃಹ ಆರೋಗ್ಯ’ ಯೋಜನೆಗೆ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ
KARNATAKA

BIG NEWS : ರಾಜ್ಯದ ಮಹತ್ವದ ‘ಗೃಹ ಆರೋಗ್ಯ’ ಯೋಜನೆಗೆ ಚಾಲನೆ ನೀಡಲಿರುವ ಸಿಎಂ ಸಿದ್ದರಾಮಯ್ಯ

By kannadanewsnow0524/10/2024 12:03 PM

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಆರೋಗ್ಯ ಯೋಜನೆಗೆ ಕ್ಷಣಗಣನೆ ಆರಂಭವಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಒಂದು ದೂರದೃಷ್ಟಿಯ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೀಗ ‘ಗೃಹ ಆರೋಗ್ಯ’ ಹೆಸರಲ್ಲಿ ಯೋಜನೆಯನ್ನ ಅನುಷ್ಠಾನಕ್ಕೆ ತರುತ್ತಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದು, ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗಿ, ಜನವರಿ ತಿಂಗಳಿನಲ್ಲಿ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅಸಾಂಕ್ರಾಮಿ ರೋಗಗಳ ನಿಯಂತ್ರಣ ಹಾಗೂ ನಿರ್ವಹಣೆಯ ಮಹತ್ವಾಕಾಂಕ್ಷೆಯೊಂದಿಗೆ “ಗೃಹ ಆರೋಗ್ಯ” ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದೇನೆ.

ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್‌ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ

ಅಸಾಂಕ್ರಾಮಿಕ ರೋಗಗಳನ್ನ ಹತೋಟಿಗೆ ತರುವುದು ಗೃಹ ಆರೋಗ್ಯ ಯೋಜನೆಯ ಮುಖ್ಯ ಗುರಿಯಾಗಿದೆ. ದೇಶದಲ್ಲಿ ಅಸಾಂಕ್ರಾಮಿಕ ರೋಗಗಳ (NCD) ಹೆಚ್ಚುತ್ತಿವೆ. ವಿಶೇಷವಾಗಿ ಕರ್ನಾಟಕದಲ್ಲಿ ಶೇಕಡಾ 26.9% ರಷ್ಟು ರಕ್ತದೊತ್ತಡ, ಶೇಕಡಾ 15.6% ರಷ್ಟು ಮಧುಮೇಹ ರೋಗಗಳಿಂದ ಜನರು ಬಳಲುತ್ತಿದ್ದು, ಇದರಿಂದ‌ ಉಂಟುಗುತ್ತಿರುವ ಮರಣ ಹಾಗೂ ಅನಾರೋಗ್ಯ ತೊಡಕುಗಳನ್ನ ತಡೆಗಟ್ಟಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೃಹ ಆರೋಗ್ಯ ಯೋಜನೆಯನ್ನ ಪರಿಚಯಿಸಿದ್ದಾರೆ.

ಅಲ್ಲದೇ ರಾಜ್ಯದಲ್ಲಿ ಶೇಕಡಾ 11.5 % ರಷ್ಟು ಬಾಯಿ ಕ್ಯಾನ್ಸರ್; ಶೇಕಡಾ 26 % ರಷ್ಟು ಸ್ತನ ಕ್ಯಾನ್ಸರ್ ಹಾಗೂ ಶೇಕಡಾ 18.3 % ರಷ್ಟು ಗರ್ಭಕಂಠದ ಕ್ಯಾನ್ಸರ್ ರೋಗಗಳಿಂದ ಜನರು ತತ್ತರಿಸುತ್ತಿದ್ದು, ಈ ರೋಗಗಳಿಗೂ ಪರಿಹಾರ ಒದಗಿಸಲು ಗೃಹ ಆರೋಗ್ಯ ಯೋಜನೆಯಲ್ಲಿ ರೂಪ ರೇಷೆಗಳನ್ನ ಸಿದ್ಧಪಡಿಸಲಾಗಿದೆ.

ಹಳ್ಳಿಗಾಡಿನ ಜನರು ರಕ್ತದೊತ್ತಡ, ಮಧುಮೇಹ ರೋಗಗಳ ತಪಾಸಣೆ ವಿಚಾರದಲ್ಲಿ ನಿರ್ಲೆಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಇದೀಗ ಆರೋಗ್ಯ ಇಲಾಖೆಯನ್ನೇ ಜನರ ಮನೆ ಬಳಿಗೆ ಕಳಿಸುತ್ತಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಮ್ಮ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜನರ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಿದ್ದಾರೆ.

ರೋಗಕ್ಕೆ ತುತ್ತಾದವರಿಗೆ ಸೂಕ್ತ ಔಷಧಿಗಳನ್ನು ತಲುಪಿಸಲಾಗುತ್ತದೆ.. ನಮ್ಮ ಜನರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು‌. ಆರಂಭಿಕ ಹಂತದಲ್ಲಿ ರಕ್ತದೊತ್ತಡ ಮಧುಮೇಹವನ್ನ ನಮ್ಮ ಜನರು ನಿರ್ಲಕ್ಷಿಸುತ್ತಾರೆ. ಆದರೆ ದೀರ್ಘಾವಧಿಯಲ್ಲಿ ಈ ರೋಗಗಳೇ ಕಿಡ್ನಿ ವೈಫಲ್ಯ, ಹೃದಯಾಘಾತಗಳಿಗೆ ಕಾರಣವಾಗುತ್ತದೆ. ಗೃಹ ಆರೋಗ್ಯದ ಮುಖಾಂತರ ನಾವು ಈಗಲೇ ತಪಾಸಣೆ ನಡೆಸಿ ಔಷಧಿಗಳನ್ನ ಕೊಟ್ಟರೆ ಮುಂದೆ ಆಗುವ ಜೀವಪಾಯಗಳನ್ನ ತಡೆಗಟ್ಟಬಹುದಯ. ವಿಶೇಷವಾಗಿ ನಮ್ಮ ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂಬ ಆಶಯವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವ್ಯಕ್ತಪಡಿಸಿದ್ದಾರೆ.

ಏನಿದು ಗೃಹ ಆರೋಗ್ಯ ಯೋಜನೆ – ಹೇಗೆ ಕಾರ್ಯ ನಿರ್ವಹಿಸಲಿದೆ?

* ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಸುರಕ್ಷಾಣಾಧಿಕಾರಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಜನರ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಿದ್ದಾರೆ.

* ವಾರದಲ್ಲಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ದಿನಕ್ಕೆ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ಕಾರ್ಯ ನಡೆಸಲಿದ್ದಾರೆ.

* ಬಾಯಿ ಕ್ಯಾನ್ಸರ್, ಮಹಿಳೆಯರ ಗರ್ಭಕಂಠ ಮತ್ತು ಸ್ತನ ಕ್ಯಾನ್ಸ‌ರ್ ಸೇರಿದಂತೆ ಸಹ ಭೇಟಿಯ ಸಂದರ್ಭದಲ್ಲಿ ಪರೀಕ್ಷಿಸಲಾಗುತ್ತದೆ.

* ಅಸಂಕ್ರಾಮಿಕ ರೋಗಗಳಿಂದ ದೂರವಿರಲು ಜೀವನಶೈಲಿ ಮಾರ್ಪಾಡು ಮಾಡಲು ಆರೋಗ್ಯ ಸಿಬ್ಬಂದಿಯಿಂದ ಸಲಹೆ ನೀಡಲಾಗುತ್ತದೆ.

* ರೋಗಗಳಿಗೆ ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧಿಗಳನ್ನು ಮಾತ್ರೆ ಪಟ್ಟಿಗೆ ಮುಖಾಂತರ ಜನರ ಬಳಿಗೆ ಒದಗಿಸಲು ಯೋಜನೆಯಲ್ಲಿ ರೂಪ ರೇಷ ಸಿದ್ಧಪಡಿಸಲಾಗಿದೆ.

* ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗುತ್ತಿದ್ದು, ಜನವರಿ ತಿಂಗಳ ಬಳಿಕ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ.

ಅಸಾಂಕ್ರಾಮಿ ರೋಗಗಳ ನಿಯಂತ್ರಣ ಹಾಗೂ ನಿರ್ವಹಣೆಯ ಮಹತ್ವಾಕಾಂಕ್ಷೆಯೊಂದಿಗೆ "ಗೃಹ ಆರೋಗ್ಯ" ಯೋಜನೆಗೆ ಇಂದು ಚಾಲನೆ ನೀಡುತ್ತಿದ್ದೇನೆ.

ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್‌ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ… pic.twitter.com/pGym4m5Evi

— Siddaramaiah (@siddaramaiah) October 24, 2024

Share. Facebook Twitter LinkedIn WhatsApp Email

Related Posts

SHOCKING : ದಾವಣಗೆರೆಯಲ್ಲಿ ದಾರುಣ ಘಟನೆ: ಶಾಲೆಯಲ್ಲೇ `ಹೃದಯಾಘಾತ’ಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ!

23/02/2026 2:07 PM1 Min Read

ALERT : `ಲ್ಯಾಪ್ ಟಾಪ್’ ಮೂಲಕ ಮೊಬೈಲ್ ಚಾರ್ಜ್ ಮಾಡ್ತೀರಾ? ಈ ಕೂಡಲೇ ಆ ಅಭ್ಯಾಸ ಬಿಟ್ಟುಬಿಡಿ, ಇಲ್ಲದಿದ್ದರೆ ದೊಡ್ಡ ನಷ್ಟ ಗ್ಯಾರಂಟಿ !

23/02/2026 1:56 PM1 Min Read

BREAKING : ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ದರೋಡೆಗೆ ಸ್ಕೆಚ್ : ಸೈರನ್ ಶಬ್ದಕ್ಕೆ ಬೆದರಿ ಕಳ್ಳ ಪರಾರಿ!

23/02/2026 1:35 PM1 Min Read
Recent News

BREAKING : ಬೆಳ್ಳಿ ಬೆಲೆಯಲ್ಲಿ ಒಂದೇ ಸಮನೆ 15,200 ರೂ. ಏರಿಕೆ! ಚಿನ್ನದ ದರದಲ್ಲೂ ಭಾರಿ ಜಿಗಿತ: ಕಾರಣ ಏನು ಗೊತ್ತಾ?

23/02/2026 2:17 PM

SHOCKING : ದಾವಣಗೆರೆಯಲ್ಲಿ ದಾರುಣ ಘಟನೆ: ಶಾಲೆಯಲ್ಲೇ `ಹೃದಯಾಘಾತ’ಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ!

23/02/2026 2:07 PM

ALERT : `ಲ್ಯಾಪ್ ಟಾಪ್’ ಮೂಲಕ ಮೊಬೈಲ್ ಚಾರ್ಜ್ ಮಾಡ್ತೀರಾ? ಈ ಕೂಡಲೇ ಆ ಅಭ್ಯಾಸ ಬಿಟ್ಟುಬಿಡಿ, ಇಲ್ಲದಿದ್ದರೆ ದೊಡ್ಡ ನಷ್ಟ ಗ್ಯಾರಂಟಿ !

23/02/2026 1:56 PM

ಇರಾನ್‌ನಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ: ‘ಸರ್ವಾಧಿಕಾರಿಗೆ ಸಾವು’ ಘೋಷಣೆ, ವಿದ್ಯಾರ್ಥಿಗಳು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಸಂಘರ್ಷ!

23/02/2026 1:38 PM
State News
KARNATAKA

SHOCKING : ದಾವಣಗೆರೆಯಲ್ಲಿ ದಾರುಣ ಘಟನೆ: ಶಾಲೆಯಲ್ಲೇ `ಹೃದಯಾಘಾತ’ಕ್ಕೆ 9ನೇ ತರಗತಿ ವಿದ್ಯಾರ್ಥಿ ಬಲಿ!

By kannadanewsnow5723/02/2026 2:07 PM KARNATAKA 1 Min Read

ದಾವಣಗೆರೆ: ವಿದ್ಯಾಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಿದ್ದ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿಯೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಅತ್ಯಂತ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ…

ALERT : `ಲ್ಯಾಪ್ ಟಾಪ್’ ಮೂಲಕ ಮೊಬೈಲ್ ಚಾರ್ಜ್ ಮಾಡ್ತೀರಾ? ಈ ಕೂಡಲೇ ಆ ಅಭ್ಯಾಸ ಬಿಟ್ಟುಬಿಡಿ, ಇಲ್ಲದಿದ್ದರೆ ದೊಡ್ಡ ನಷ್ಟ ಗ್ಯಾರಂಟಿ !

23/02/2026 1:56 PM

BREAKING : ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ದರೋಡೆಗೆ ಸ್ಕೆಚ್ : ಸೈರನ್ ಶಬ್ದಕ್ಕೆ ಬೆದರಿ ಕಳ್ಳ ಪರಾರಿ!

23/02/2026 1:35 PM

SHOCKING : ಪ್ರೀತಿ ಹೆಸರಲ್ಲಿ ಪೈಶಾಚಿಕ ದೌರ್ಜನ್ಯ: ಬೆಂಗಳೂರಿನಲ್ಲಿ ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಸ್ನೇಹಿತರಿಂದಲೇ `ಗ್ಯಾಂಗ್ ರೇಪ್’?

23/02/2026 1:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.