ಬೆಂಗಳೂರು : ರಾಜ್ಯ ಬಜೆಟ್ ಮಂಡಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸಲಿದ್ದಾರೆ.
ಹೌದು, ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮಾರ್ಚ್ 10ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಜಂಟಿ ಅಧಿವೇಶನದ ಮುಂದುವರೆದ ಭಾಗವಾಗಿ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು 3 ವಾರಗಳ ಕಾಲ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಜನವರಿ 2ರಂದು ಹೊಸ ವರ್ಷದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಬಗ್ಗೆ ಅಧಿಕೃತ ಅದೇಶ ಹೊರಡಿಸಲಾಗುವುದು.
ಬಜೆಟ್ ಅಧಿವೇಶನದ ಪೂರ್ವದಲ್ಲಿ ಮಾರ್ಚ್ 10ರಿಂದ 4 ದಿನಗಳ ಕಾಲ ಜಂಟಿ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಮಾರ್ಚ್ 14 ರಂದು ಸಿಎಂ ಸಿದ್ದರಾಮಯ್ಯ ಅವರು 16 ನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಮತ್ತೊಂದು ದಾಖಲೆ ಬರೆಯಲಿದ್ದಾರೆ.