ಬೆಳಗಾವಿ : ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇಂದು ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿದರು.
ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಜಗತ್ತಿನ 2ನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ಈ ವೇಳೆ ಸಿಎಂ ಸಿದ್ದರಾಮಯ್ಯ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿದರು ಅವರ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪೀಕರ್ ಯುಟಿ ಖಾದರ್ ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಹಲವರು ಉಪಸ್ಥಿತಿ ಇದ್ದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜದ ಅನಾವರಣ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ @siddaramaiah ಹಾಗೂ ಉಪಮುಖ್ಯಮಂತ್ರಿ @DKShivakumar ಅವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಹಾಗೂ ಸಚಿವರುಗಳು ಉಪಸ್ಥಿತರಿದ್ದರು. pic.twitter.com/oy6wlcRFRd
— Karnataka Congress (@INCKarnataka) December 9, 2025








